ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಸಭ್ಯ ಕಾಮೆಂಟ್ ಮಾಡಿದ್ದ ಪ್ರಕರಣ ಸಂಬಂಧ ವಿವರಣೆ ನೀಡುವಂತೆ ವಿಜಯಲಕ್ಷ್ಮಿ ಅವರಿಗೆ ಪೊಲೀಸರು 2ನೇ ನೋಟಿಸ್ ಕಳಿಸಿದ್ದಾರೆ. ಘಟನೆ ಬಗ್ಗೆ ಹೇಳಿಕೆ ದಾಖಲಿಸಿಕೊಳ್ಳಲು ಚೆನ್ನಮ್ಮನಕರೆ ಅಚ್ಚುಕಟ್ಟು ಪೊಲೀಸರಿಂದ ನೋಟಿಸ್ ಕಳಿಸಲಾಗಿದೆ. ಪೊಲೀಸರ ನೋಟಿಸ್ಗಳಿಗೆ ವಿಜಯಲಕ್ಷ್ಮಿ ಅವರು ಕ್ಯಾರೇ ಎನ್ನುತ್ತಿಲ್ಲ.
ವಿಜಯಲಕ್ಷ್ಮಿ ದರ್ಶನ್ ಬಗ್ಗೆ ಕೆಟ್ಟ ಕಮೆಂಟ್ಗಳು ಬಂದಿವೆ ಎಂದು ಮಹಿಳಾ ಆಯೋಗಕ್ಕೆ ದೂರು ನೀಡಲಾಗಿತ್ತು. ಹಾಗಾಗಿ ಮಹಿಳಾ ಆಯೋಗದಿಂದ ಸುಮೋಟೊ ಪ್ರಕರಣ ದಾಖಲಿಸುವಂತೆ ಸೂಚನೆ ನೀಡಲಾಗಿತ್ತು. ಎರಡು ನೋಟಿಸ್ಗಳಿಗೂ ವಿಜಯಲಕ್ಷ್ಮಿ ಅವರಿಂದ ಯಾವುದೇ ಉತ್ತರ ಬಾರದ ಹಿನ್ನೆಲೆಯಲ್ಲಿ ಈಗ ಮೂರನೇ ನೋಟಿಸ್ ನೀಡಲು ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರ ಸಿದ್ಧತೆ ಮಾಡಿಕೊಂಡಿದ್ದಾರೆ. ಒಂದು ವೇಳೆ, ಮೂರನೇ ನೋಟಿಸ್ಗೂ ಯಾವುದೇ ಪ್ರತಿಕ್ರಿಯೆ ಬರಲಿಲ್ಲ ಎಂದಾದರೆ ಪೊಲೀಸರು ಈ ಪ್ರಕರಣವನ್ನು ಮುಕ್ತಾಯ ಮಾಡಲಿದ್ದಾರೆ.


