Tuesday, February 10, 2026
16.6 C
Bengaluru
Google search engine
LIVE
ಮನೆರಾಜ್ಯಮನುಷ್ಯತ್ವ ಮರೆತ ಸೊಸೆ; ಮಾವನಿಗೇ ಪೆಟ್ರೋಲ್ ಸುರಿದು ಬೆಂಕಿ

ಮನುಷ್ಯತ್ವ ಮರೆತ ಸೊಸೆ; ಮಾವನಿಗೇ ಪೆಟ್ರೋಲ್ ಸುರಿದು ಬೆಂಕಿ

ತಮಿಳುನಾಡು: ಕಡಲೂರಿನಲ್ಲಿ ಮನುಷ್ಯತ್ವವೇ ತಲೆತಗ್ಗಿಸುವಂತಹ ಘಟನೆಯೊಂದು ನಡೆದಿದ್ದು, ಅಕ್ರಮ ಸಂಬಂಧವನ್ನು ಪ್ರಶ್ನಿಸಿದ ಮಾವನ ಮೇಲೆ ಸೊಸೆಯೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ದಾರುಣ ಕೃತ್ಯ ಬೆಳಕಿಗೆ ಬಂದಿದೆ. 64 ವರ್ಷದ ರಾಜೇಂದ್ರನ್ ಎಂಬುವವರು ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಪ್ರಸ್ತುತ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಸೊಸೆ ಜಯಪ್ರಿಯಾಳ ಅಕ್ರಮ ಸಂಬಂಧದ ವಿಚಾರ ತಿಳಿದ ರಾಜೇಂದ್ರನ್, ಅದನ್ನು ಖಂಡಿಸಿ ಆಕೆಗೆ ಬುದ್ಧಿಮಾತು ಹೇಳಿದ್ದರು. ಇದೇ ದ್ವೇಷವನ್ನು ಮನಸ್ಸಿನಲ್ಲಿಟ್ಟುಕೊಂಡ ಸೊಸೆ, ತನ್ನ ಪ್ರಿಯಕರನೊಂದಿಗೆ ಸೇರಿ ಈ ಭೀಕರ ಸಂಚು ರೂಪಿಸಿದ್ದಾಳೆ.

ರಾಜೇಂದ್ರನ್ ಅವರು ರಸ್ತೆಯಲ್ಲಿ ಬೈಕ್ ಚಲಾಯಿಸಿಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಅವರನ್ನು ಅಡ್ಡಗಟ್ಟಿದ ಸೊಸೆ ಮತ್ತು ಆಕೆಯ ಸಹಚರರು, ಏಕಾಏಕಿ ಅವರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಶರೀರಕ್ಕೆ ಬೆಂಕಿ ಹತ್ತಿಕೊಂಡಿದ್ದರಿಂದ ಉರಿ ತಾಳಲಾರದೆ ರಾಜೇಂದ್ರನ್ ರಸ್ತೆಯಲ್ಲೇ ಕಿರುಚುತ್ತಾ ಓಡಾಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ದಾಳಿಯಲ್ಲಿ ರಾಜೇಂದ್ರನ್ ಅವರ ದೇಹದ ಶೇ.70 ರಷ್ಟು ಭಾಗ ಸುಟ್ಟುಹೋಗಿದ್ದು, ಅವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಅಮಾನವೀಯ ಕೃತ್ಯಕ್ಕೆ ಸಂಬಂಧಿಸಿದಂತೆ ಕಡಲೂರು ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಪ್ರಮುಖ ಆರೋಪಿ ಜಯಪ್ರಿಯಾ, ಆಕೆಯ ಪ್ರಿಯಕರ ಮಣಿಕಂದನ್ ಸೇರಿದಂತೆ ಒಟ್ಟು ನಾಲ್ವರನ್ನು ಬಂಧಿಸಿದ್ದಾರೆ. ಸಂಬಂಧಗಳ ಮೌಲ್ಯ ಕುಸಿಯುತ್ತಿರುವುದಕ್ಕೆ ಈ ಘಟನೆ ಸಾಕ್ಷಿಯಂತಿದ್ದು, ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಸಾರ್ವಜನಿಕರು ಆಗ್ರಹಿಸಿದ್ದಾರೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments