Wednesday, January 28, 2026
24.9 C
Bengaluru
Google search engine
LIVE
ಮನೆ#Exclusive NewsTop Newsಪಂಚಮಸಾಲಿಗೆ 2ಎ ಮೀಸಲು ತಡೆದಿದ್ದು ಶಾಸಕ ಯತ್ನಾಳ್- ಮಾಜಿ ಸಚಿವ ರೇಣುಕಾಚಾರ್ಯ ಕಿಡಿ

ಪಂಚಮಸಾಲಿಗೆ 2ಎ ಮೀಸಲು ತಡೆದಿದ್ದು ಶಾಸಕ ಯತ್ನಾಳ್- ಮಾಜಿ ಸಚಿವ ರೇಣುಕಾಚಾರ್ಯ ಕಿಡಿ

ದಾವಣೆಗೆರೆ: ವಿಜಯಪುರ ಶಾಸಕ ಬಸವನಗೌಡ ಯತ್ನಾಳ್ ಅವರೇ ಪಂಚಮಸಾಲಿ ಸಮಾಜಕ್ಕೆ ಪ್ರವರ್ಗ 2ಎ ಮೀಸಲು ನೀಡುವಂತೆ ತಡೆದವರು ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ, ಎಲ್ಲ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ನೀಡಿರುವ ಮಾಜಿ ಮಖ್ಯಮಂತ್ರಿ ಯಡಿಯೂರಪ್ಪ ಅವರು ಮಂಚಮಸಾಲಿ ಸಮಾಜಕ್ಕೆ 2ಎ ಮೀಸಲು ನೀಡಲು ಮುಂದಾಗಿದ್ದರು. ಮಾತ್ರವಲ್ಲದೆ ಸಂಪುಟ ಸಭೆಯ ಕಾರ್ಯಸೂಚಿಯಲ್ಲೂ ಮೀಸಲು ಅಂಶವನ್ನು ಸೇರಿಸಿದ್ದರು. ಇದೇ ಯತ್ನಾಳ್ ಅವರೇ ಅಜೆಂಡಾದಿಂದ ಆ ವಿಷಯವನ್ನೇ ತೆಗೆಸಿದರು. ಈಗ ಯಡಿಯೂರಪ್ಪ ವಿರುದ್ಧವೇ ಮಾತನಾಡುತ್ತಿದ್ದಾರೆ ಎಂದು ದೂರಿದರು.

ಹಾದಿಬೀದಿಯಲ್ಲಿ ಎಲ್ಲೆಂದರಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಯಡಿಯೂರಪ್ಪ ವಿರುದ್ಧ ಮಾತನಾಡುತ್ತಿದ್ದಾರೆ. ಸ್ವಯಂ ಘೋಷಿತ ನಾಯಕರಾಗಿರುವ ಯತ್ನಾಳ್ ನಾನೇ ಮುಂದಿನ ಮುಖ್ಯಮಂತ್ರಿ ಎಂಬುದಾಗಿ ಹೇಳಿಕೊಂಡು ಓಡಾಡುತ್ತಿದ್ದಾರೆ ಎಂದು ರೇಣುಚಾರ್ಯ ಆಕ್ರೋಶ ವ್ಯಕ್ತಪಡಿಸಿದರು.

ವರಿಷ್ಠರಿಗೆ ದೂರು: ಇನ್ನು 2-3 ದಿನಗಳಲ್ಲಿ ಬೆಂಗಳೂರಿನಲ್ಲಿ ಹಾಲಿ, ಮಾಜಿ ಶಾಸಕರು, ಸಂಸದರು, ಮುಖಂಡರು ಸಭೆ ನಡೆಸಿ ಕೆಲವರು ಅನಗತ್ಯವಾಗಿ ಪಕ್ಷದಲ್ಲಿ ಗೊಂದಲ ಮೂಡಿಸುತ್ತಿರುವ ಬಗ್ಗೆ ಚರ್ಚಿಸಲಾಗುವುದು. ವರಿಷ್ಠರಿಗೆ ದೂರು ನೀಡಲಾಗುವುದು. ಪಕ್ಷದ ಮುಖಂಡರು ಯತ್ನಾಳ್ ಇತರರನ್ನು ಉಚ್ಛಾಟಿಸಬೇಕು ಎಂದು ಒತ್ತಾಯಿಸಿದರು.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments