Thursday, November 20, 2025
26.6 C
Bengaluru
Google search engine
LIVE
ಮನೆಜಿಲ್ಲೆಮಂತ್ರ ಮಾಂಗಲ್ಯದ ಮೂಲಕ ಸರಳವಾಗಿ ನಡೆದ ಮದುವೆ ; ಬೀಗರಾಗಿ ಕಾರ್ಯನಿರ್ವಹಿಸಿದ ಅಧಿಕಾರಿಗಳು......!

ಮಂತ್ರ ಮಾಂಗಲ್ಯದ ಮೂಲಕ ಸರಳವಾಗಿ ನಡೆದ ಮದುವೆ ; ಬೀಗರಾಗಿ ಕಾರ್ಯನಿರ್ವಹಿಸಿದ ಅಧಿಕಾರಿಗಳು……!

ದಾವಣಗೆರೆ; ರಾಷ್ಟ್ರಕವಿ ಕುವೆಂಪುರವರ ಮಂತ್ರ ಮಾಂಗಲ್ಯ ಧಾರಣೆಯಂತೆ ಮಹಿಳಾ ನಿಲಯದ ದಿವ್ಯ ಎಂ ಇವರ ಮದುವೆಯು ಚಿತ್ರದುರ್ಗ ತಾಲ್ಲೂಕಿನ ಮುದ್ದಾಪುರ ಗ್ರಾಮದ ನಾಗರಾಜ.ಟಿ ಇವರೊಂದಿಗೆ ದಾವಣಗೆರೆ ರಾಮನಗರದಲ್ಲಿನ ರಾಜ್ಯ ಮಹಿಳಾ ನಿಲಯದಲ್ಲಿ ಅತ್ಯಂತ ಸರಳ, ಕ್ರಮಬದ್ದವಾಗಿ ಮದುವೆ ನಡೆದು ಅಧಿಕಾರಿಗಳು ಬೀಗರಾಗಿ ಭಾಗವಹಿಸಿ ಎಲ್ಲಾ ಮದುವೆ ಶಾಸ್ತ್ರಗಳನ್ನು ಪೂರೈಸಿ ನವ ದಂಪತಿಗಳಿಗೆ ಶುಭ ಹಾರೈಸಿದರು.

ನೂತನ ದಂಪತಿಗಳಿಗೆ ಶುಭ ಹಾರೈಸಿದ ಜಿಲ್ಲಾಧಿಕಾರಿ ಡಾ.ವೆಂಕಟೇಶ್.ಎಂ.ವಿ. ಮಾತಾನಾಡಿ ಕುವೆಂಪುರವರು ಹಾಕಿ ಕೊಟ್ಟಿರುವಂತಹ ಸರಳವಾದ ಮಂತ್ರ ಮಾಂಗಲ್ಯದಲ್ಲಿ ಇಬ್ಬರು ನವ ದಂಪತಿಗಳು ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ಮದುವೆ ಬಹಳ ವಿಶೇಷವಾಗಿ ಇಡೀ ಸಮಾಜಕ್ಕೆ ಮಾದರಿಯಾಗಿದೆ. ವಧು ಕಡೆಯಿಂದ ನಮ್ಮ ಅಧಿಕಾರಿಗಳು ಬಂಧುಗಳಾಗಿ ಕೆಲಸ ನಿರ್ವಹಿಸಿದ್ದಾರೆ.

ವರನ ಕಡೆಯಿಂದ ಅವರ ಅಕ್ಕ, ಮಾವಂದಿರು ಭಾಗವಹಿಸಿ ಈ ಮದುವೆಗೆ ಸಾಕ್ಷೀಕರಿಸಿದ್ದಾರೆ. ಇವರು ನವದಂಪತಿಗಳಿಗೆ ಸಂವಿಧಾನ ಪ್ರಸ್ತಾವನೆಯುಳ್ಳ ಪೋಟೋ ಪ್ರೇಮ್ ನೀಡುವ ಮೂಲಕ ಶುಭ ಹಾರೈಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್.ಬಿ.ಇಟ್ನಾಳ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಅಪರ ಜಿಲ್ಲಾಧಿಕಾರಿ ಸೈಯ್ಯದಾ ಆಫ್ರೀನ್ ಭಾನು. ಎಸ್.ಬಳ್ಳಾರಿ, ಉಪವಿಭಾಗಾಧಿಕಾರಿ ದುರ್ಗಶ್ರೀ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕಿ ವಾಸಂತಿ ಉಪ್ಪಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ; ಷಣ್ಮುಖಪ್ಪ ಹಾಗೂ ಇನ್ನಿತರೆ ಅಧಿಕಾರಿಗಳು ಆಗಮಿಸಿ ವಧುವರರಿಗೆ ಶುಭ ಕೋರಿದರು.

ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ನಾಗರಾಜ ಸಂವಿಧಾನ ಜಾಗೃತಿ ಜಾಥಾದ ಅಂಗವಾಗಿ ಸಂವಿಧಾನ ಪೀಠಿಕೆ ಓದುವ ಮೂಲಕ ಪ್ರತಿಜ್ಞೆ ಸ್ವೀಕರಿಸಲಾಯಿತು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments