Tuesday, January 27, 2026
26.7 C
Bengaluru
Google search engine
LIVE
ಮನೆ#Exclusive NewsTop Newsಶೃಂಗೇರಿಗೆ ಡಿಕೆಶಿ ಭೇಟಿ : ನನಗೆ ಯಾರ ಬೆಂಬಲವೂ ಬೇಡ, ಪಕ್ಷ ಹೇಳಿದಂತೆ ನಾನು...

ಶೃಂಗೇರಿಗೆ ಡಿಕೆಶಿ ಭೇಟಿ : ನನಗೆ ಯಾರ ಬೆಂಬಲವೂ ಬೇಡ, ಪಕ್ಷ ಹೇಳಿದಂತೆ ನಾನು ಕೆಲಸ ಮಾಡುತ್ತೇನೆ

ಶೃಂಗೇರಿ : “ಕರ್ಮಣ್ಯೇ ವಾಧಿಕಾರಸ್ತೇ ಮಾ ಫಲೇಷು ಕದಾಚನ ಎಂಬ ಶ್ಲೋಕದಂತೆ ನಮ್ಮ ಪ್ರಯತ್ನ ನಾವು ಮಾಡೋಣ ಫಲಾಫಲ ದೇವರಿಗೆ ಬಿಡೋಣ. ನನಗೆ ಯಾರ ಬೆಂಬಲವೂ ಬೇಡ, ಪಕ್ಷ ಹೇಳಿದಂತೆ ನಾನು ಕೆಲಸ ಮಾಡುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು.

ಶೃಂಗೇರಿ ಮಠಕ್ಕೆ ಭೇಟಿ ನೀಡಿದ್ದ ಅವರು ಮಾಧ್ಯಮದವರೊಂದಿಗೆ ಮಾತನಾಡುತ್ತ, ”ಕರ್ಮಣ್ಯೇ ವಾಧಿಕಾರಸ್ತೇ ಮಾ ಫಲೇಷು ಕದಾಚನ ಎಂಬ ಶ್ಲೋಕದಂತೆ ನಮ್ಮ ಪ್ರಯತ್ನ ನಾವು ಮಾಡೋಣ, ಫಲಾಫಲ ದೇವರಿಗೆ ಬಿಡೋಣ. ಮುಂದಿನ ಸಿಎಂ ಡಿ.ಕೆ.ಶಿವಕುಮಾರ್ ಅವರು ಆಗಬೇಕು ಎಂದು ಕಾರ್ಯಕರ್ತರು ಒತ್ತಾಯ ಮಾಡುತ್ತಿದ್ದಾರೆ. ಆದರೆ, ಈ ವಿಚಾರದಲ್ಲಿ ಯಾವುದೇ ಶಾಸಕರು ನನಗೆ ಬೆಂಬಲ ನೀಡುವುದು ಬೇಡ. ನಾನುಂಟು, ಕಾಂಗ್ರೆಸ್ ಪಕ್ಷವುಂಟು. ಪಕ್ಷದ ನಾಯಕರು ಹೇಳಿದಂತೆ ನಾನು ಕೆಲಸ ಮಾಡಿಕೊಂಡು ಹೋಗುತ್ತೇನೆ. ನನ್ನ ಪರವಾಗಿ ಶಾಸಕರು, ಕಾರ್ಯಕರ್ತರು ಕೂಗುವುದು ಬೇಡ. ನಾನು ನನ್ನ ಕರ್ತವ್ಯ ಮಾಡುತ್ತೇನೆ” ಎಂದು ಹೇಳಿದರು.

ಟೆಂಪಲ್ ರನ್ ಎನ್ನುವವರು, ದೇವಾಲಯ ಮುಚ್ಚಿಬಿಡಿ

ನೀವು ದೇವಾಲಯ ಹಾಗೂ ಮಠಗಳ ಭೇಟಿಗೆ ಟೆಂಪಲ್ ರನ್ ಎಂದು ವ್ಯಾಖ್ಯಾನ ಮಾಡಲಾಗುತ್ತಿದೆ ಎಂದು ಕೇಳಿದಾಗ, “ನಾನು ಧರ್ಮದ ಮೇಲೆ ನಂಬಿಕೆ ಇಟ್ಟುಕೊಂಡಿರುವವನು, ನಿತ್ಯ ಪೂಜೆ ಮಾಡುವವನು. ನನ್ನ ಒಳಿತು, ರಾಜ್ಯದ ಒಳಿತು, ನನ್ನ ನಂಬಿದವರ ಹಾಗೂ ಸಮಾಜದ ಒಳಿತಿಗಾಗಿ ನಾನು ಪ್ರಾರ್ಥಿಸುತ್ತೇನೆ ಎಂದರು.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments