ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಅಭದ್ರತೆ, ಒಳ ಬೇಗುದಿ ಇದ್ದು, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಹನೆಯ ಕಟ್ಟೆ ಒಡೆಯುವ ಕಾಲ ಸನ್ನಿಹಿತವಾಗಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿಯವರು ಬುಧವಾರ ಹೇಳಿದರು.
ಇದು ನಿರೀಕ್ಷಿತ ಬೆಳವಣಿಗೆ. ಇದರಲ್ಲಿ ಬಹಳ ಮುಖ್ಯ ವಿಚಾರ ಡಿಕೆಶಿವಕುಮಾರ್ ಅವರ ಸಹನೆ. ಅವರು ತಮ್ಮ ವ್ಯಕ್ತಿತ್ವಕ್ಕೆ ವಿರುದ್ಧವಾಗಿ ಬಹಳ ಸಹನೆ ಪ್ರದರ್ಶನ ಮಾಡುತ್ತಿದ್ದಾರೆ. ಅದು ಅವರ ಮುತ್ಸದ್ಧಿತನವೋ? ಹೈಕಮಾಂಡ್ ಸೂಚನೆಯೋ ನೋಡಬೇಕು. ಡಿಕೆಶಿವಕುಮಾರ್ ಅವರ ಸಹನೆ ಕಟ್ಟೆ ಯಾವಾಗ ಒಡೆಯುತ್ತದೆ ಅನ್ನುವುದು ಮುಖ್ಯವಾಗುತ್ತದೆ. ಅದರ ಪ್ರಕ್ರಿಯೆ ಆರಂಭವಾಗಿದ್ದು, ಕಾಲ ಯಾವಾಗ ಬರುತ್ತದೆ ಎಂದು ನೋಡಬೇಕು ಎಂದು ಹೇಳಿದರು.