ಮುಂದಿನ 5 ವರ್ಷ ನಾನೇ ಸಿಎಂ ಅಂತ ಸಿದ್ದರಾಮಯ್ಯ ಹೇಳಿದ್ದಾರೆ. ನಂದಿಬೆಟ್ಟದ ಮೇಲೆ ನಿಂತು ಸಿದ್ದರಾಮಯ್ಯ ಕುರ್ಚಿಯಿಂದ ಕೆಳಗಿಳಿಯಲ್ಲ ಅಂತ ಸಾರಿದ್ದಾರೆ.. ಇದಕ್ಕೆ ಡಿಸಿಎಂ ಡಿಕೆಶಿವಕುಮಾರ್, ಪ್ರತಿಕ್ರಿಯಿಸಿದ್ದು, ನನಗೆ ಕಾಯೋದು ಬಿಟ್ಟು ಬೇರೆ ಆಪ್ಷನ್ನೇ ಇಲ್ಲ ಅಂತ ಹೇಳಿದ್ದಾರೆ..
ನಂದಿಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆದಿದ್ದು ಈ ವೇಳೆ ಸಿದ್ದರಾಮಯ್ಯ 5 ವರ್ಷ ನಾನೇ ಸಿಎಂ ಎಂದರು. ಈ ಹೇಳಿಕೆಗೆ ಡಿಸಿಎಂ ಡಿಕೆಶಿ ಕೂಡ ಪ್ರತಿಕ್ರಿಯಿಸಿದ್ದು, ನಾನು ಸಿದ್ದರಾಮಯ್ಯ ಬೆನ್ನಿಗೆ ನಿಂತು ಸಹಕಾರ ನೀಡುತ್ತೇನೆ. ನನಗೆ ಬೇರೆ ಆಪ್ಷನ್ನೇ ಇಲ್ಲ. ಹೈಕಮಾಂಡ್ ಕೈಗೊಳ್ಳುವ ನಿರ್ಧಾರಕ್ಕೆ ನಾನು ಬಂದ್ಧ ಎಂದು ಡಿಕೆ ಶಿವಕುಮಾರ್ ಹೇಳಿದರು..
ಲಕ್ಷಾಂತರ ಕಾರ್ಯಕರ್ತರು ಪಕ್ಷವನ್ನು ಬೆಂಬಲಿಸಿದ್ದಾರೆ. ಪಕ್ಷದ ತೀರ್ಮಾನಕ್ಕೆ ನಾನು ಬದ್ಧನಾಗಿರುತ್ತೇನೆ. ಸಿದ್ದರಾಮಯ್ಯನವರು ಸಿಎಂ ಆಗಿದ್ದಾರೆ, ಅಪಸ್ವರ ತೆಗೆಯುವುದು ಬೇಡ ಎಂದು ಬೆಂಬಲಿಗರಿಗೆ ಡಿಕೆ ಶಿವಕುಮಾರ್ ಕಿವಿಮಾತು ಹೇಳಿದ್ದಾರೆ. ಲಕ್ಷಾಂತರ ಕಾರ್ಯಕರ್ತರು ಪಕ್ಷವನ್ನು ಬೆಂಬಲಿಸಿದ್ದಾರೆ. ಪಕ್ಷದ ತೀರ್ಮಾನಕ್ಕೆ ನಾನು ಬದ್ಧನಾಗಿರುತ್ತೇನೆ. ಸಿದ್ದರಾಮಯ್ಯನವರು ಸಿಎಂ ಆಗಿದ್ದಾರೆ, ಅಪಸ್ವರ ತೆಗೆಯುವುದು ಬೇಡ ಎಂದು ಬೆಂಬಲಿಗರಿಗೆ ಡಿಕೆ ಶಿವಕುಮಾರ್ ಕಿವಿಮಾತು ಹೇಳಿದ್ದಾರೆ..