Monday, June 23, 2025
26.6 C
Bengaluru
Google search engine
LIVE
ಮನೆUncategorizedಯತ್ನಾಳ್ ಹೇಳಿಕೆ ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಯತ್ನಾಳ್ ಹೇಳಿಕೆ ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ನವದೆಹಲಿ, ಜುಲೈ 30*

“ಯತ್ನಾಳ್ ಹೇಳಿಕೆಗಳನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ. ಅವರ ವಿರುದ್ಧ ಈಗಾಗಲೇ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದೇನೆ. ಹೀಗಾಗಿ ನನ್ನ ವಿರುದ್ಧ ಮಾತಾಡುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಶಿವಕುಮಾರ್ ಅವರನ್ನು ಸಿಎಂ ಮಾಡಲು ವಿಜಯೇಂದ್ರ ಪಾದಯಾತ್ರೆ ಮಾಡುತ್ತಿದ್ದಾರೆ ಎಂಬ ಯತ್ನಾಳ್ ಹೇಳಿಕೆ ಬಗ್ಗೆ ಮಾಧ್ಯಮಗಳು ಮಂಗಳವಾರ ಗಮನ ಸೆಳೆದಾಗ, “ಯತ್ನಾಳ್ ಏನೆಲ್ಲಾ ಹೇಳಿಕೆ ನೀಡಿದ್ದಾರೆ ಎಂದು ಗೊತ್ತಿದೆ. ನಮ್ಮ ಮತ್ತು ಯತ್ನಾಳ್ ನಡುವೆ ಬೇರೆಯದೇ ರಾಜಕೀಯ ಇದೆ. ಅವರ ವಿರುದ್ಧ ಈಗಾಗಲೇ ₹200 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲಿಸಿದ್ದೇನೆ. ಹೀಗಾಗಿ ಅವರು ನನ್ನ ಬಗ್ಗೆ ಮಾತನಾಡುತ್ತಿದ್ದಾರೆ. ಅವರ ಹೇಳಿಕೆ ಬಗ್ಗೆ ಮುಂದೆ ಮಾತನಾಡೋಣ” ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments