Thursday, January 29, 2026
20.3 C
Bengaluru
Google search engine
LIVE
ಮನೆರಾಜ್ಯತಲಕಾವೇರಿಗೆ ಡಿಸಿಎಂ ಡಿಕೆಶಿ ಭೇಟಿ, ವಿಶೇಷ ಪೂಜೆ ಸಲ್ಲಿಕೆ

ತಲಕಾವೇರಿಗೆ ಡಿಸಿಎಂ ಡಿಕೆಶಿ ಭೇಟಿ, ವಿಶೇಷ ಪೂಜೆ ಸಲ್ಲಿಕೆ

ಕೊಡಗು: ಬೃಹತ್ ಜಲ ಸಂರಕ್ಷಣಾ ಅಭಿಯಾನದ ಪ್ರಯುಕ್ತ ಡಿಸಿಎಂ ಡಿ.ಕೆ.ಶಿವಕುಮಾರ್ ಭಾಗಮಂಡಲ ತಲಕಾವೇರಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಬಳಿಕ ಶ್ರೀ ಭಗಂಡೇಶ್ವರ ದೇಗುಲ ಹಾಗೂ ಕಾವೇರಿ, ಸುಜ್ಯೋತಿ, ಕನ್ನಿಕಾ ನದಿಗಳ ತ್ರಿವೇಣಿ ಸಂಗಮದಲ್ಲಿ ಪೂಜೆ ಸಲ್ಲಿಸಿ ಪವಿತ್ರ ತೀರ್ಥ ಸಂಗ್ರಹಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ, ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಹಾಜರಿದ್ದರು. ಬೆಂಗಳೂರಿನಲ್ಲಿ ಇಂದು ಸಂಜೆ ನಡೆಯಲಿರುವ ‘ಕಾವೇರಿ ಆರತಿ’ಯ ಪುಣ್ಯ ಕಾರ್ಯಕ್ರಮದ ವೇಳೆ ಸಾರ್ವಜನಿಕರಿಗೆ ಈ ತೀರ್ಥ ವಿತರಿಸಲಾಗುವುದು.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments