ಬೆಳಗಾವಿ: ಕಿತ್ತೂರು ಚೆನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣ ಮೃಗಗಳ ಸಾವಿನ ಸರಣಿ ಮುಂದುವರಿದಿದ್ದು, ಇಂದು ಮತ್ತೊಂದು ಕೃಷ್ಣಮೃಗ ಸಾವನ್ನಪ್ಪಿದೆ..
ಇದೀಗ ಮೃತಪಟ್ಟ ಕೃಷ್ಣಮೃಗಗಳ ಸಾವಿನ ಸಂಖ್ಯೆ 29ಕ್ಕೆ ಏರಿಕೆಯಾಗಿದೆ.. ನವೆಂಬರ್ 13 ರಂದು 8 ಕೃಷ್ಣ ಮೃಗಗಳು ಮೃತಪಟ್ಟಿದ್ದು, ನಿನ್ನೆ ಒಂದೇ 20 ಕೃಷ್ಣಮೃಗಗಳ ಸಾವನ್ನಪ್ಪಿವೆ.. ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಕೃಷ್ಣ ಮೃಗಗಳ ಸಾವಿನ ಕಾರಣ ಪತ್ತೆಯಾಗಿದೆ..
ಬೆಳಗಾವಿ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ 29 ಕೃಷ್ಣಮೃಗಗಳು ಸಾವನ್ನಪ್ಪಿದ್ದು, ಭಾರೀ ಆತಂಕ ಮೂಡಿಸಿತ್ತು. ಈ ರೀತಿ ಸಾಲು ಸಾಲಾಗಿ ಕೃಷ್ಣಮೃಗಗಳು ಸಾವನ್ನಪ್ಪಲು ಕಾರಣ ಎನ್ನುವ ಪ್ರಶ್ನೆ ಮೂಡಿತ್ತು. ಹೀಗಾಗಿ ಮೃತ ದೇಹಗಳ ಮಾದರಿಯನ್ನ ಪರೀಕ್ಷೆಗೆಂದು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ವರದಿ ಮಂಗಳವಾರ ಬರುವ ನಿರೀಕ್ಷೆ ಇದೆ. ಇದೀಗ ತಜ್ಞ ವೈದ್ಯರ ಮರಣೋತ್ತರ ಪರೀಕ್ಷೆಯಲ್ಲಿ ಕಾರಣ ಬಹಿರಂಗವಾಗಿದೆ ಎಂದು ತಿಳಿದು ಬಂದಿದೆ.
ತಜ್ಞ ವೈದ್ಯರ ಮರಣೋತ್ತರ ಪರೀಕ್ಷೆಯಲ್ಲಿ ಕೃಷ್ಣಮೃಗಗಳ ಸಾವಿಗೆ ಕಾರಣವೇನು ಅನ್ನೋದು ಪತ್ತೆಯಾಗಿದೆ. ಬ್ಯಾಕ್ಟೀರಿಯಾ ಹಿಮೋರೇಜಿಕ್ ಸೇಫ್ಟಿಸಿಮೀಯಾ ಎಂಬ ಮಾರಣಾಂತಿಕ ಕಾಯಿಲೆಗೆ ಕೃಷ್ಣ ಮೃಗಗಳ ಸರಣಿ ಸಾವಿಗೆ ಕಾರಣ ಎನ್ನಲಾಗ್ತಿದೆ.
ಸಾವನ್ನಪ್ಪಿದ 25 ಕೃಷ್ಣಮೃಗಗಳಿಗೆ ಅಗ್ನಿಸ್ಪರ್ಶದ ಮೂಲಕ ಅಂತ್ಯಕ್ರಿಯೆ ನೆರವೇರಿಸಲಾಗಿದೆ. 3 ಕೃಷ್ಣಮೃಗಳನ್ನ ಮರಣೋತ್ತರ ಪರೀಕ್ಷೆಗೆ ಒಳಪಡಿಸಿದ್ದಾರೆ. ಕರ್ನಾಟಕ ಮೃಗಾಲಯ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಡಾ.ಸುನೀಲ್ ಪವಾರ್ ನೇತೃತ್ವದಲ್ಲಿ ಮರಣೋತ್ತರ ಪರೀಕ್ಷೆ ನಡೆದಿದೆ.


