ಬೆಂಗಳೂರು: ಇನ್ಮುಂದೆ ಸರ್ಕಾರಿ ಕೆಲಸಗಳಿಗೆ ವಾರ್ಷಿಕ ಗುತ್ತಿಗೆ ಆಧಾರದಲ್ಲಿ ಹೆಲಿಕಾಪ್ಟರ್, ವಿಮಾನ ಸೇವೆ ಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇಂದು ಡಿಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ
ವಾರ್ಷಿಕ ಗುತ್ತಿಗೆ ಆಧಾರದಲ್ಲಿ ಹೆಲಿಕಾಪ್ಟರ್, ವಿಮಾನ ಸೇವೆ ಪಡೆಯುವ ವಿಚಾರವಾಗಿ ಸಭೆ ನಡೆಯಿತು.
ಸಭೆಯಲ್ಲಿ ವಾರ್ಷಿಕ ಗುತ್ತಿಗೆ ಆಧಾರದಲ್ಲಿ ಸೇವೆ ಪಡೆಯಲು ನಿರ್ಧಾರ ಮಾಡಲಾಗಿದೆ. ಇಷ್ಟು ದಿನ ಗಂಟೆಗಳ ಅವಧಿಯಲ್ಲಿ ಹೆಲಿಕಾಪ್ಟರ್/ವಿಶೇಷ ವಿಮಾನ ಗುತ್ತಿಗೆ ಪಡೆಯಲಾಗುತ್ತಿತ್ತು. ಇನ್ನು ಮುಂದೆ ಗಂಟೆಗಳ ಆಧಾರದಲ್ಲಿ ಬಾಡಿಗೆ ಪಡೆಯದೇ ಇರಲು ನಿರ್ಧಾರ ಮಾಡಲಾಗಿದೆ. ಗಂಟೆಗಳ ಬದಲಾಗಿ ವಾರ್ಷಿಕ ಗುತ್ತಿಗೆ ಆಧಾರದಲ್ಲಿ ಹೆಲಿಕಾಪ್ಟರ್/ವಿಮಾನ ಸೇವೆ ಪಡೆಯಲು ನಿರ್ಧಾರ ಮಾಡಲಾಗಿದೆ. ವಾರ್ಷಿಕ ಗುತ್ತಿಗೆಗೆ ಸೂಕ್ತ ತರಬೇತಿ ಹೊಂದಿರುವ ಸಂಸ್ಥೆಗಳಿಗೆ ಟೆಂಡರ್ ಆಹ್ವಾನ ಮಾಡಲು ನಿರ್ಧಾರ ಮಾಡಲಾಗಿದೆ. ಆಸಕ್ತಿಯುಳ್ಳ ಸಂಸ್ಥೆಗಳು ಟೆಂಡರ್‌ನಲ್ಲಿ ಭಾಗಿಯಾಗಿಯಲು ಅವಕಾಶ ನೀಡಲಾಗುತ್ತದೆ.
ಸರ್ಕಾರಿ ಕೆಲಸಗಳ ಸಂಬಂಧ ಓಡಾಡಲು ಇಷ್ಟು ದಿನ ಗಂಟೆಗಳ ಅವಧಿಯಲ್ಲಿ ಹೆಲಿಕಾಪ್ಟರ್ ಹಾಗೂ ವಿಶೇಷ ವಿಮಾನಗಳನ್ನು ಗುತ್ತಿಗೆ ಪಡೆಯಲಾಗುತ್ತಿತ್ತು. ಆದ್ರೆ, ಗಂಟೆ ಆಧಾರದಲ್ಲಿ ಸರಕಾರದ ಬೊಕ್ಕಸದಿಂದ 28 ಕೋಟಿ ಖರ್ಚಾಗುತ್ತಿತ್ತು. ಮತ್ತೆ ಸಮಯಕ್ಕೆ ಸರಿಯಾಗಿ ಹೆಲಿಕಾಪ್ಟರ್ ಸೇವೆ ಲಭ್ಯವಿರುತ್ತಿರಲಿಲ್ಲ. ಇದರಿಂದ ಗಂಟೆಗಳ ಅವಧಿ ಗುತ್ತಿಗೆಯನ್ನು ಕೈ ಬಿಟ್ಟು ವಾರ್ಷಿಕವಾಗಿ ಗುತ್ತಿಗೆ ಪಡೆಯಲು ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನವಾಗಿದೆ. ವಾರ್ಷಿಕ ಗುತ್ತಿಗೆಯಿಂದ ಸಮಯಕ್ಕೆ ಸರಿಯಾಗಿ ಹೆಲಿಕಾಪ್ಟರ್ ಹಾಗೂ ವಿಮಾನ ಸೇವೆ ಸಿಗಲಿದೆ ಎನ್ನುವುದಕ್ಕಾಗಿಈ ನಿರ್ಧಾರ ಕೈಗೊಳ್ಳಲಾಗಿದ್ದು, ಇದಕ್ಕಾಗಿ ಸೂಕ್ತ ತರಬೇತಿ ಹೊಂದಿರುವ ಸಂಸ್ಥೆಗಳಿಗೆ ಟೆಂಡರ್ ನಲ್ಲಿ ಭಾಗಿಯಾಗಲು ಅವಕಾಶ ನೀಡಲಾಗಿದೆ. ಇನ್ನು ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಸಭೆ ನಡೆದ ಈ ಸಭೆಯಲ್ಲಿ ಸಚಿವರಾದ ಕೆ.ಜೆ.ಜಾರ್ಜ್, ಭೈರತಿ ಸುರೇಶ್ ಸೇರಿದಂತೆ ಇತರೆ ಅಧಿಕಾರಿಗಳು ಭಾಗಿಯಾಗಿದ್ದರು.
ಇನ್ನು ಸಭೆ ಬಳಿಕ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ಹೆಲಿಕಾಪ್ಟರ್ ಮತ್ತು ಏರ್ ಕ್ರಾಫ್ಟ್ ಬಾಡಿಗೆ ಪಡೆಯೋ ಕುರಿತು ಬಹಳ ದಿನದಿಂದ ಪೆಂಡಿಂಗ್ ಇತ್ತು. ಸಿಎಂ ನಮಗೆ ಜವಾಬ್ದಾರಿ ನೀಡಿದ್ದರು. ಹೆಚ್ ಎ ಎಲ್ ಬಳಿಯೂ ಮಾತನಾಡಲು ಹೇಳಿದ್ದರು. ಯಾವ ರಾಜಕಾರಣಿ ಕೂಡ ಇಲ್ಲ. ಇಡೀ ದೇಶದಲ್ಲಿ ನೋಡಿಕೊಂಡು ಟೆಂಡರ್ ಕರೆಯುತ್ತೇವೆ ಎಂದು ಸ್ಪಷ್ಟಪಡಿಸಿದರು.