ಸಿನಿಮಾಸುದ್ದಿ

ಬಗ್ಗದ ವಿಜಯಲಕ್ಷ್ಮಿ ದರ್ಶನ್ ;ಸೈಬರ್ ಪೊಲೀಸರಿಂದ 50 ಪುಟಗಳ ಚಾರ್ಜ್‌ಶೀಟ್..?

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಾಚ್ಯ ಮತ್ತು ಅವಮಾನಕಾರಿ ಕಾಮೆಂಟ್‌ಗಳನ್ನು ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಬರ್ ಕ್ರೈಂ ಪೊಲೀಸರು ಚಾರ್ಜ್‌ಶೀಟ್ ಸಲ್ಲಿಕೆಗೆ ಸಿದ್ಧತೆ ನಡೆಸಿದ್ದಾರೆ. ಪ್ರಕರಣದಲ್ಲಿ ಈಗಾಗಲೇ ಆರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ಮುಂದಿನ ಒಂದು ವಾರದೊಳಗೆ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸುವ ಸಾಧ್ಯತೆ ಇದೆ.

ತನಿಖೆಯ ಭಾಗವಾಗಿ ಆರೋಪಿಗಳ ಹೇಳಿಕೆಗಳನ್ನು ದಾಖಲಿಸಿಕೊಂಡಿರುವ ಪೊಲೀಸರು, ಸಾಮಾಜಿಕ ಜಾಲತಾಣಗಳಲ್ಲಿ ಆರೋಪಿಗಳು ಬಳಸಿದ ಪೋಸ್ಟ್‌ಗಳು, ಕಾಮೆಂಟ್‌ಗಳು ಹಾಗೂ ಡಿಜಿಟಲ್ ದಾಖಲೆಗಳನ್ನು ಪ್ರಮುಖ ಸಾಕ್ಷಿಗಳಾಗಿ ಸಂಗ್ರಹಿಸಿದ್ದಾರೆ. ಈ ಎಲ್ಲ ಅಂಶಗಳನ್ನು ಒಳಗೊಂಡಂತೆ ಸುಮಾರು 50 ಪುಟಗಳ ಚಾರ್ಜ್‌ಶೀಟ್ ತಯಾರಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳ ಕೇಂದ್ರ ಕಚೇರಿಗಳಿಗೆ ಪೊಲೀಸರು ಪತ್ರ ಬರೆದಿದ್ದು, ಕೆಲವು ಖಾತೆಗಳ ವಿವರಗಳು ಮತ್ತು ತಾಂತ್ರಿಕ ಮಾಹಿತಿಗಾಗಿ ಉತ್ತರದ ನಿರೀಕ್ಷೆಯಲ್ಲಿದ್ದಾರೆ.

60 ದಿನಗಳ ಒಳಗೆ ಚಾರ್ಜ್‌ಶೀಟ್ ಸಲ್ಲಿಸದಿದ್ದರೆ ಆರೋಪಿಗಳಿಗೆ ಜಾಮೀನು
ಕಾನೂನಿನ ಪ್ರಕಾರ, ಆರೋಪಿಗಳನ್ನು ಬಂಧಿಸಿದ ದಿನದಿಂದ 60 ದಿನಗಳ ಒಳಗೆ ಚಾರ್ಜ್‌ಶೀಟ್ ಸಲ್ಲಿಸದಿದ್ದರೆ ಆರೋಪಿಗಳಿಗೆ ಜಾಮೀನು ದೊರೆಯುವ ಸಾಧ್ಯತೆ ಇದೆ. ಈ ಹಿನ್ನೆಲೆ, ಆರೋಪಿಗಳು ಜಾಮೀನಿನಲ್ಲಿ ಹೊರಬರುವುದನ್ನು ತಡೆಯಲು ಸೈಬರ್ ಪೊಲೀಸರು ನಿಗದಿತ ಅವಧಿಯೊಳಗೆ, ಅಂದರೆ ಮುಂದಿನ ಒಂದು ವಾರದೊಳಗೆ ಚಾರ್ಜ್‌ಶೀಟ್ ಸಲ್ಲಿಸಲು ತಯಾರಿ ನಡೆಸಿದ್ದಾರೆ.

Comments (0)

Your email address will not be published. Required fields are marked *

Back to top button