Top Newsಸುದ್ದಿ

AAPಯ ನೂತನ ಸಿಎಂ ಹೆಸರು ಪ್ರಸ್ತಾಪಿಸಿದ ಕೇಜ್ರಿವಾಲ್‌-ಮುಂಚೂಣಿಯಲ್ಲಿ ಅತಿಶಿ

ನವದೆಹಲಿ: ದೆಹಲಿ ನೂತನ ಸಿಎಂ ಸ್ಥಾನಕ್ಕೆ ಸಚಿವೆ ಅತಿಶಿ ಅವರ ಹೆಸರನ್ನು ಅರವಿಂದ್‌ ಕೇಜ್ರಿವಾಲ್‌ ಪ್ರಸ್ತಾಪಿಸಿದ್ದಾರೆ. ಅತಿಶಿ ಅವರು ದೆಹಲಿ ಎಎಪಿ ಶಾಸಕಾಂಗ ಪಕ್ಷದ ನಾಯಕಿಯಾಗಿ ಆಯ್ಕೆಯಾಗಿದ್ದಾರೆ ಎಂದು ಎಎಪಿ ಮೂಲಗಳು ತಿಳಿಸಿವೆ.

ಇಂದು ಮಧ್ಯಾಹ್ನ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರನ್ನು ಭೇಟಿಯಾದ ನಂತರ ಅರವಿಂದ್ ಕೇಜ್ರಿವಾಲ್ ಅವರು ಉನ್ನತ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ, ದೆಹಲಿ ಸಚಿವ ಅತಿಶಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಇಂದು ನಡೆದ ಆಮ್ ಆದ್ಮಿ ಪಕ್ಷದ ನಾಯಕರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಅತಿಶಿ ಪ್ರಸ್ತುತ ದೆಹಲಿ ಸರ್ಕಾರದಲ್ಲಿ ಶಿಕ್ಷಣ ಮತ್ತು PWD ಪ್ರಮುಖ ಖಾತೆಗಳನ್ನು ಹೊಂದಿದ್ದಾರೆ. ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯದ ಹಳೆಯ ವಿದ್ಯಾರ್ಥಿ ಅತಿಶಿ ಅವರು ದೆಹಲಿಯ ಶಾಲೆಗಳಲ್ಲಿ ಶಿಕ್ಷಣವನ್ನು ಕೂಲಂಕಷವಾಗಿ ಪರಿಶೀಲಿಸುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು.

Comments (0)

Your email address will not be published. Required fields are marked *

Back to top button