Wednesday, April 30, 2025
24 C
Bengaluru
LIVE
ಮನೆ#Exclusive NewsTop Newsದೆಹಲಿ ಗದ್ದುಗೆಗೇರಿದ ಅತಿಶಿ ಮರ್ಲೆನಾ-ಸಚಿವರ ಜೊತೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ

ದೆಹಲಿ ಗದ್ದುಗೆಗೇರಿದ ಅತಿಶಿ ಮರ್ಲೆನಾ-ಸಚಿವರ ಜೊತೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ದೆಹಲಿಯ ನೂತನ ಸಿಎಂ ಆಗಿ ಆಮ್ ಆದ್ಮಿ ಪಕ್ಷದ ಅತಿಶಿ ಸಿಂಗ್ ಮರ್ಲೆನಾ ಪ್ರಮಾಣವಚನ ಸ್ವೀಕರಿಸಿದ್ದಾರೆ. ಲೆಫ್ಟಿನೆಂಟ್ ಗವರ್ನರ್ ನಿವಾಸವಾದ ರಾಜಭವನದಲ್ಲಿ ಅತಿಶಿ ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅತಿಶಿಯವರೊಂದಿಗೆ ಆಮ್ ಆದ್ಮಿ ಪಕ್ಷದ ಐವರು ಶಾಸಕರು ಕೂಡ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಎಎಪಿ ಆರಂಭದಲ್ಲಿ ಅತಿಶಿ ಮಾತ್ರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಬೇಕೆಂದು ಯೋಜಿಸಿತ್ತು. ಇಂದು ಅತಿಶಿ ಮಂತ್ರಿಮಂಡಲದೊಂದಿಗೆ ಪ್ರಮಾಣವಚನ ಸ್ವೀಕರಿಸಿದ್ದಾರೆ. ಹಿಂದಿನ ಅರವಿಂದ್ ಕೇಜ್ರಿವಾಲ್ ಸರ್ಕಾರದಲ್ಲಿ ಸಚಿವರಾಗಿದ್ದ ಎಎಪಿ ನಾಯಕರಾದ ಗೋಪಾಲ್ ರಾಯ್, ಕೈಲಾಶ್ ಗೆಹ್ಲೋಟ್, ಸೌರಭ್ ಭಾರದ್ವಾಜ್ ಮತ್ತು ಇಮ್ರಾನ್ ಹುಸೇನ್ ಅವರು ಸಚಿವರಾಗಿ ಮುಂದುವರೆಯಲಿದ್ದು, ಪಕ್ಷದ ಇಬ್ಬರು ಶಾಸಕರನ್ನು ಸಹ ಹೊಸ ಕ್ಯಾಬಿನೆಟ್‌ಗೆ ಸೇರಿಸಿಕೊಳ್ಳಲಾಗಿದೆ. ಶಾಸಕ ಮುಖೇಶ್ ಅಹ್ಲಾವತ್ ಅವರು ಹೊಸದಾಗಿ ಅತಿಶಿ ಅವರ ಸಂಪುಟದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments