ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರ್ನಾಟಕದ `ಗೃಹಲಕ್ಷ್ಮಿ’ ಮಾದರಿಯಲ್ಲಿ `ಪ್ಯಾರಿ ದೀದಿ ಯೋಜನೆ’ ಮೂಲಕ ದೆಹಲಿ ಮಹಿಳೆಯರಿಗೆ ಪ್ರತಿ ತಿಂಗಳು 2,500 ರೂ. ನೀಡುವ ಗ್ಯಾರಂಟಿ ಭರವಸೆಯನ್ನು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಸೋಮವಾರ ಪ್ರಕಟಿಸಿದರು.
ಆಮ್ ಆದ್ಮಿ ಪಕ್ಷದ ನಂತರ ಈಗ ಕಾಂಗ್ರೆಸ್ ದೆಹಲಿಯ ಮಹಿಳೆಯರಿಗೆ ಪ್ರತಿ ತಿಂಗಳು 2500 ರೂಪಾಯಿ ನೀಡುವುದಾಗಿ ಭರವಸೆ ನೀಡಿದೆ. ಎಎಪಿಯ ‘ಮಹಿಳಾ ಸಮ್ಮಾನ್’ ಯೋಜನೆಯ ಮುಂದೆ, ಕಾಂಗ್ರೆಸ್ ‘ಪ್ಯಾರಿ ದೀದಿ’ ಯೋಜನೆಯನ್ನು ಘೋಷಿಸಿದೆ.
ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷವು ಮೊದಲು ಮಹಿಳಾ ಸಮ್ಮಾನ್ ಯೋಜನೆಯಡಿ ಮಹಿಳೆಯರಿಗೆ 2100 ರೂಪಾಯಿ ನೀಡುವುದಾಗಿ ಘೋಷಿಸಿತ್ತು. ದೆಹಲಿಯ ಮಾಜಿ ಮುಖ್ಯಮಂತ್ರಿ ಮತ್ತು ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರ ಘೋಷಣೆಯ ನಂತರ, ಕಾಂಗ್ರೆಸ್ ಕೂಡ ಮಹಿಳಾ ಮತದಾರರನ್ನು ಸೆಳೆಯಲು ತಂತ್ರವನ್ನು ಹೂಡಿದೆ. ‘ಪ್ಯಾರಿ ದೀದಿ ಯೋಜನೆ’ ಅಡಿಯಲ್ಲಿ ದೆಹಲಿಯ ಮಹಿಳೆಯರಿಗೆ ಪ್ರತಿ ತಿಂಗಳು 2500 ರೂಪಾಯಿ ನೀಡುವುದಾಗಿ ಕಾಂಗ್ರೆಸ್ ಭರವಸೆ ನೀಡಿದೆ.