ನವದೆಹಲಿ: ಅಬಕಾರಿ ನೀತಿಯಲ್ಲಿ ಅಕ್ರಮದ ಆರೋಪದ ಮೇಲೆ ಸಿಬಿಐನಿಂದ ಬಂಧನಕೊಳ್ಳಪಟ್ಟ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂಕೋರ್ಟ್ ಜಾಮೀನು ನೀಡಿದೆ. ಇಡಿ ಪ್ರಕರಣದಿಂದ ಜಾಮೀನು ಪಡೆದ ಹಿನ್ನೆಲೆ ಸಿಬಿಐ ಹತಾಶೆಯಿಂದ ಅವರನ್ನು ಬಂಧಿಸಿದೆ ಎಂದು ಸುಪ್ರೀಂ ಅಭಿಪ್ರಾಯಪಟ್ಟಿದೆ.
ಅರವಿಂದ ಕೇಜ್ರಿವಾಲ್ ಮತ್ತು ಸಿಬಿಐ ಪರ ವಕೀಲರನ್ನು ಆಲಿಸಿದ ನಂತರ ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 5 ರಂದು ಈ ಪ್ರಕರಣದ ತೀರ್ಪನ್ನು ಕಾಯ್ದಿರಿಸಿತ್ತು. ಪ್ರಕರಣದ ವಿಚಾರಣೆ ವೇಳೆ ಸಿಬಿಐ ಪರ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್ ವಿ ರಾಜು, ಜಾಮೀನಿಗಾಗಿ ವಿಚಾರಣಾ ನ್ಯಾಯಾಲಯದ ಮೊರೆ ಹೋಗದಿರುವುದಕ್ಕೆ ಕೇಜ್ರಿವಾಲ್ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದ್ದರು.
ಕೇಜ್ರಿವಾಲ್‌ಗೆ ಜಾಮೀನು ನೀಡುವ ವೇಳೆ ಆದೇಶದಲ್ಲಿ ನ್ಯಾಯಮೂರ್ತಿ ಸೂರ್ಯಕಾಂತ್ ಅವರು, ಸಿಬಿಐನಿಂದ ಬಂಧನ ಕಾನೂನು ಬದ್ಧವಾಗಿದೆ. ಅರವಿಂದ್ ಕೇಜ್ರಿವಾಲ್ ಅವರು ₹10 ಲಕ್ಷ ಜಾಮೀನು ಬಾಂಡ್ ಮೇಲೆ ಬಿಡುಗಡೆಯಾಗಬೇಕಿದೆ. ಈ ಪ್ರಕರಣದ ಬಗ್ಗೆ ಸಾರ್ವಜನಿಕವಾಗಿ ಪ್ರತಿಕ್ರಿಯಿಸಲು ದೆಹಲಿ ಸಿಎಂಗೆ ಅವಕಾಶವಿಲ್ಲ ಎಂದು ಮಹತ್ವದ ಸೂಚನೆ ನೀಡಿದರು.
ದೆಹಲಿಯ ಅಬಕಾರಿ ನೀತಿ ಪ್ರಕರಣವೇನು?
ದೆಹಲಿ ಸರ್ಕಾರವು 2021-22 ರಲ್ಲಿ ಅಬಕಾರಿ ನೀತಿಯನ್ನು ತಂದಿದ್ದು, ನಗರದ ಪ್ರಮುಖ ಮದ್ಯದ ವ್ಯಾಪಾರವನ್ನು ಪುನಶ್ಚೇತನಗೊಳಿಸುವ ಉದ್ದೇಶದಿಂದ ಮಾರಾಟ-ಪರಿಮಾಣ-ಆಧಾರಿತ ಆಡಳಿತವನ್ನು ವ್ಯಾಪಾರಿಗಳಿಗೆ ಪರವಾನಗಿ ಶುಲ್ಕದೊಂದಿಗೆ ಬದಲಾಯಿಸುತ್ತದೆ ಮತ್ತು ಕುಖ್ಯಾತ ಲೋಹದ ಗ್ರಿಲ್‌ಗಳಿಂದ ಮುಕ್ತವಾದ ಸ್ವಾಂಕಿಯರ್ ಅಂಗಡಿಗಳಿಗೆ ಭರವಸೆ ನೀಡಿತು. ಅಂತಿಮವಾಗಿ ಗ್ರಾಹಕರಿಗೆ ಉತ್ತಮ ಖರೀದಿ ಅನುಭವವನ್ನು ನೀಡುತ್ತದೆ. ಆದರೆ, ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಅಕ್ರಮಗಳನ್ನು ಆರೋಪಿಸಿ ನೀತಿಯ ಬಗ್ಗೆ ಸಿಬಿಐ ತನಿಖೆಗೆ ಕೋರಿದ ನಂತರ ನೀತಿಯನ್ನು ರದ್ದುಗೊಳಿಸಲಾಗಿತ್ತು.
ಇಡಿ ಪ್ರಕಾರ, ಅಬಕಾರಿ ನೀತಿಯನ್ನು ಅಂತಿಮಗೊಳಿಸಲು ಕೇಜ್ರಿವಾಲ್ ನೇತೃತ್ವದ ಎಎಪಿ ₹100 ಕೋಟಿಗಳಷ್ಟು ಕಿಕ್‌ಬ್ಯಾಕ್ ಪಡೆದಿದೆ. ಈ ಹಣದ ದೊಡ್ಡ ಭಾಗವನ್ನು ಪಕ್ಷವು ತನ್ನ ಗೋವಾ ಚುನಾವಣಾ ಪ್ರಚಾರದಲ್ಲಿ ಬಳಸಿಕೊಂಡಿದೆ ಎಂದು ಆರೋಪಿಸಲಾಗಿದೆ.
ಇನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದ ಬೆನ್ನಲ್ಲೇ ಆಮ್ ಆದ್ಮಿ ಪಕ್ಷ ತನ್ನ X ಹ್ಯಾಂಡಲ್‌ನಲ್ಲಿ ‘ಸತ್ಯ ಮೇವ ಜಯತೆ’ ಎಂದು ಪೋಸ್ಟ್ ಮಾಡಿದೆ.