ದೆಹಲಿ ರೈಲ್ವೆ ನಿಲ್ದಾಣದಲ್ಲಿ ಶನಿವಾರ ರಾತ್ರಿ ಕಾಲ್ತುಳಿತದಿಂದ ಮಹಾ ಕುಂಭಮೇಳಕ್ಕೆ ಹೊರಟಿದ್ದ 18 ಜನ ಸಾವನ್ನಪ್ಪಿದ್ದಾರೆ.
ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಮಹಾ ಕುಂಭಮೇಳಕ್ಕೆ ಹೊರಟಿದ್ದ ಭಕ್ತರಿಂದ ದೆಹಲಿ ರೈಲ್ವೇ ನಿಲ್ದಾಣ ತುಂಬಿ ತುಳುಕಿತ್ತಿತ್ತು. ಅದಕ್ಕಾಗಿ 2 ವಿಶೇಷ ರೈಲುಗಳ ವ್ಯವಸ್ಥೆ ಮಾಡಲಾಗಿತ್ತು. ಆದರೆ ಈ ರೈಲುಗಳಿಗೂ ಮೊದಲು ಭುವನೇಶ್ವರಕ್ಕೆ ತೆರಳಬೇಕಿದ್ದ ರಾಜಧಾನಿ ಮತ್ತು ಸ್ವತಂತ್ರ ಸೇನಾನಿ ಎಕ್ಸ್‌ಪ್ರೆಸ್ ರೈಲುಗಳು ತಡವಾಗಿ ನಿಲ್ದಾಣವನ್ನು ತಲುಪಿದವು. ಹೀಗಾಗಿ ರೈಲು ನಿಲ್ದಾಣದಲ್ಲಿ ಒಮ್ಮೆಗೆ ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳವಾಯಿತು.
ಇದೇ ಸಮಯಕ್ಕೆ ಪ್ಲಾಟ್ ಫಾರ್ಮ್ 14 ಮತ್ತು 15ಕ್ಕೆ ಪ್ರಯಾಗ್ ರಾಜ್‌ಗೆ ಹೊರಟ ವಿಶೇಷ ರೈಲು ನಿಲ್ದಾಣಕ್ಕೆ ಆಗಮಿಸಿದೆ. ಈ ವೇಳೆ ಸಾವಿರಾರು ಜನರು ಏಕಾಏಕಿ ರೈಲಿಮ ಕಡೆ ನುಗ್ಗಿ ಬಂದಿದ್ದಾರೆ. ಕಾಲ್ತುಳಿತ ಸಂಭವಿಸಿದೆ. ಈ ಅವಘಡದಲ್ಲಿ 18 ಮಂದಿ ಸಾವಿಗೀಡಾಗಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿ
ಘಟನೆ ನಡೆದ ಸ್ಥಳಕ್ಕೆ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಭೇಟಿ ನೀಡಿ ತನಿಖೆಗೆ ಆದೇಶಿಸಿದ್ದಾರೆ. ಇನ್ನು ಘಟನೆ ಸಂಬಂಧ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ.