ದೆಹಲಿ ರೈಲ್ವೆ ನಿಲ್ದಾಣದಲ್ಲಿ ಶನಿವಾರ ರಾತ್ರಿ ಕಾಲ್ತುಳಿತದಿಂದ ಮಹಾ ಕುಂಭಮೇಳಕ್ಕೆ ಹೊರಟಿದ್ದ 18 ಜನ ಸಾವನ್ನಪ್ಪಿದ್ದಾರೆ.
ಈ ಹಿನ್ನಲೇಯಲ್ಲಿ ಮೃತ ಕುಟುಂಬಗಳಿಗೆ ರೆಲ್ವೆ ಇಲಾಖೆ ತಲಾ 10 ಲಕ್ಷ ರೂ. ಪರಿಹಾರ ಘೋಷಿಸಿದೆ.
ಇನ್ನು ಗಂಭೀರವಾಗಿ ಗಾಯಗೊಂಡವರಿಗೆ ತಲಾ 2.5 ಲಕ್ಷ ಮತ್ತು ಸಣ್ಣಪುಟ್ಟ ಗಾಯಗಳಾದವರಿಗೆ ತಲಾ 1 ಲಕ್ಷ ಪರಿಹಾರ ಘೋಷಿಸಲಾಗಿದೆ ಎಂದು ರೆಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಮಹಾಕುಂಭಮೇಳದಲ್ಲಿ ಭಾಗಿಯಾಗಲು ಸಾವಿರಾರು ಜನ ರೈಲ್ವೆ ನಿಲ್ದಾಣದಲ್ಲಿ ಜಮಾಯಿಸಿದ್ದರು. ಆದರೆ ಕೆಲ ರೈಲುಗಳು ವಿಳಂಬವಾದ ಕಾರಣ 14ನೇ ಪ್ಲಾಟ್ ಫಾರ್ಮ್ ಬಳಿ ಕಾಲ್ತುಳಿತ ಸಂಭವಿಸಿದೆ ಎಂದು ವರದಿಯಾಗಿದೆ.


