ನವದೆಹಲಿ : ರಾಜಕಾರಣಿ, ಅಜಾತಶತ್ರು ಪ್ರಧಾನಿ ಎಂದೇ ಖ್ಯಾತರಾಗಿದ್ದ ದಿವಂಗತ ಅಟಲ್ ಬಿಹಾರಿ ಅವರ 99ನೇ ಜನ್ಮದಿನದ ಅಂಗವಾಗಿ, ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಮಾಜಿ ಪ್ರಧಅನಿ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು.
ಉಪರಾಷ್ಟ್ರಪತಿ ಜಗದೀಪ್ ಧನ್ಕರ್, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಅನುರಾಗ್ ಠಾಕೂರ್, ಜಿತೇಂದ್ರ ಸಿಂಗ್ ತೋಮರ್ ಸೇರಿದಂತೆ ಹಲವು ಗಣ್ಯರು ಅಟಲ್ ಸ್ಮಾರಕಕ್ಕೆ ತಮ್ಮ ಗೌರವವನ್ನು ಸಲ್ಲಿಸಿದರು.