#Exclusive NewsTop News

ಹಿಂದೂಗಳ ಸ್ಮಶಾನದ ಕಾಂಪೌಂಡ್ ಒಡೆದು ಇಂದಿರಾ ಕ್ಯಾಂಟೀನ್ ನಿರ್ಮಾಣ; ಪ್ರಮೋದ್ ಮುತಾಲಿಕ್ ಕಿಡಿ

ಹುಬ್ಬಳ್ಳಿಯಲ್ಲಿ ಇಂದು ಮಾತನಾಡಿದ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕರ್ನಾಟಕದಲ್ಲಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಹುಬ್ಬಳ್ಳಿಯ ಮಂಟೂರು ರಸ್ತೆಯಲ್ಲಿರುವ ಹಿಂದೂ ಸ್ಮಶಾನದ ಕಾಂಪೌಂಡ್​ ಒಡೆದು ಇಂದಿರಾ ಕ್ಯಾಂಟೀನ್ ಅನ್ನು ನಿರ್ಮಿಸಲಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಹುಬ್ಬಳ್ಳಿ: ಹುಬ್ಬಳ್ಳಿಯ ಮಂಟೂರು ರಸ್ತೆಯಲ್ಲಿರುವ ಹಿಂದೂ ಸ್ಮಶಾನದ ಕಾಂಪೌಂಡ್ ಒಡೆದು ಇಂದಿರಾ ಕ್ಯಾಂಟೀನ್ ನಿರ್ಮಾಣ​ ಮಾಡಲಾಗಿದೆ ಎಂದಿರುವ ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್, ಶಾಸಕ ಪ್ರಸಾದ್ ಅಬ್ಬಯ್ಯ ವಿರುದ್ಧ ಕ್ಯಾಂಟೀನ್ ನಿರ್ಮಾಣದ ಆರೋಪ ಮಾಡಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆ ಎಂದು ಶಾಸಕ ಅಬ್ಬಯ್ಯ ದರ್ಪ ತೋರಿದ್ದಾರೆ ಎಂದು ಹೇಳಿದ್ದಾರೆ.

ಹಿಂದೂ ಸ್ಮಶಾನದ ಕಾಂಪೌಂಡ್ ಒಡೆದು ಎರಡೇ ದಿನದಲ್ಲಿ ರಾತ್ರೋರಾತ್ರಿ ಇಂದಿರಾ ಕ್ಯಾಂಟೀನ್ ಕಟ್ಟಿದ್ದಾರೆ. ಕೂಡಲೇ ಕ್ಯಾಂಟೀನ್ ಕಟ್ಟಡದ ಸ್ಥಳಾಂತರ ಮಾಡುವಂತೆ ಆಗ್ರಹ ಮಾಡಲಾಗಿದೆ. ಇಲ್ಲದಿದ್ದರೆ ನಾವೇ ಇಂದಿರಾ ಕ್ಯಾಂಟೀನ್​​​ ತೆರವು ಮಾಡುತ್ತೇವೆ ಎಂದು ಹುಬ್ಬಳ್ಳಿಯಲ್ಲಿ ಶ್ರೀರಾಮಸೇನೆ ಸಂಸ್ಥಾಪಕ ಮುತಾಲಿಕ್​ ಹೇಳಿಕೆ ನೀಡಿದ್ದಾರೆ.

Comments (0)

Your email address will not be published. Required fields are marked *

Back to top button