ರಾಜಕೀಯ

ಉಪಸಭಾಪತಿ ಎಂ.ಕೆ. ಪ್ರಾಣೇಶ್ ಪರಿಷತ್‌ ಸದಸ್ಯತ್ವ ರದ್ದು!

Deputy Chairman M.K. Pranesh Parishad membership cancelled!

ನವದೆಹಲಿ : ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ. ಪ್ರಾಣೇಶ್ ಅವರ ಸದಸ್ಯತ್ವವನ್ನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ. ನಗರ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆಯಲ್ಲಿ ನಾಮನಿರ್ದೇಶಿತ ಸದಸ್ಯರ ಮತದಾನದ ಹಕ್ಕಿನ ಕುರಿತಾದ ವಿವಾದದಲ್ಲಿ ಸುಪ್ರೀಂ ಕೋರ್ಟ್ ಈ ಮಹತ್ವದ ತೀರ್ಪು ನೀಡಿದೆ.

2021ರ ಡಿಸೆಂಬರ್‌ನಲ್ಲಿ ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಚುನಾವಣೆ ನಡೆದಿತ್ತು. ಈ ಚುನಾವಣೆಯಲ್ಲಿ ಎಂ.ಕೆ. ಪ್ರಾಣೇಶ್ ಅವರು 1,188 ಮತಗಳನ್ನು ಪಡೆದರೆ, ಅವರ ಪ್ರತಿಸ್ಪರ್ಧಿ ಗಾಯತ್ರಿ ಶಾಂತೇಗೌಡ ಅವರು 1,182 ಮತಗಳನ್ನು ಗಳಿಸಿದ್ದರು. ಕೇವಲ ಆರು ಮತಗಳ ಅಂತರದಿಂದ ಪ್ರಾಣೇಶ್ ಜಯಭೇರಿ ಬಾರಿಸಿದ್ದರು.

ಆದರೆ, ಈ ಚುನಾವಣೆಯಲ್ಲಿ ಶೃಂಗೇರಿ, ಕೊಪ್ಪ, ಎನ್‌.ಆರ್‌.ಪುರ ಮತ್ತು ಮೂಡಿಗೆರೆ ಪಟ್ಟಣ ಪಂಚಾಯಿತಿಗಳ 12 ನಾಮನಿರ್ದೇಶಿತ ಸದಸ್ಯರು ಮತದಾನ ಮಾಡಿದ್ದರು. ಈ ಬೆಳವಣಿಗೆಯನ್ನು ಪ್ರಶ್ನಿಸಿ ಗಾಯತ್ರಿ ಶಾಂತೇಗೌಡ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಸುಪ್ರೀಂಕೋರ್ಟ್ ಅವರ ಅರ್ಜಿಯನ್ನು ವಜಾಗೊಳಿಸಿದ್ದು, ಹೈಕೋರ್ಟ್ ಆದೇಶವನ್ನು ಎತ್ತಿಹಿಡಿದಿದೆ. ಇದರೊಂದಿಗೆ ಪ್ರಾಣೇಶ್ ಅವರ ವಿಧಾನ ಪರಿಷತ್ ಸದಸ್ಯತ್ವ ರದ್ದಾಗಿದೆ.

Comments (0)

Your email address will not be published. Required fields are marked *

Back to top button