ಕ್ರೈಂ ಸ್ಟೋರಿಜಿಲ್ಲೆರಾಜಕೀಯರಾಜ್ಯ

ಉಪ ತಹಶೀಲ್ದಾರ್ ಕಿರುಕುಳ ಕಂಪ್ಯೂಟರ್ ಆಪರೇಟರ್ ಆತ್ಮಹತ್ಯೆ!

ಮೈಸೂರು:  ಉಪ ತಹಶೀಲ್ದಾರ್ ಕಿರುಕುಳ ತಾಳಲಾರದೆ ಕಂಪ್ಯೂಟರ್ ಆಪರೇಟರ್ ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ. ಆತ್ಮಹತ್ಯೆಗೆ ಶರಣಾದ ಕಂಪ್ಯೂಟರ್ ಆಪರೇಟರ್ ಪರಮೇಶ್ ಎಂದು ಗುರುತಿಸಲಾಗಿದೆ.

ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಪರಮೇಶ್ ವಿಕಲಚೇತನಾಗಿದ್ದನು. ತಾಲೂಕಿನ ಹುಲ್ಲಹಳ್ಳಿ ನಾಡ ಕಚೇರಿಯಲ್ಲಿ ಪರಮೇಶ್ ಕಂಪ್ಯೂಟರ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ. ಇದೇ ವೇಳೆ ಸುಖಾಸುಮ್ಮನೆ ಕೆಲಸದ ವಿಚಾರ ತೆಗೆದುಕೊಂಡು ಇವರಿಗೆ ಉಪ ತಹಶೀಲ್ದಾರ್ ಶಿವಕುಮಾರ್ ಮಾನಸಿಕವಾಗಿ ಹಿಂಸೆ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಉಪ ತಹಶಿಲ್ದಾರ್ ಕಿರುಕುಳ ತಾಳಲಾರದೆ ಪರಮೇಶ್​ ಡೆತ್ ನೋಟ್ ಬರೆದಿಟ್ಟು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದರು. ಕೂಡಲೇ ಪರಮೇಶ್ ಅವರನ್ನು ಮೈಸೂರಿನ ಕೆ.ರ್.ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಪರಮೇಶ್ ಮೃತಪಟ್ಟಿದ್ದಾರೆ. ನನ್ನ ಸಾವಿಗೆ ಉಪ ತಹಸೀಲ್ದಾರ್ ಶಿವಕುಮಾರ್ ಕಾರಣ ಎಂದು ಪರಮೇಶ್​​ ಡೆತ್ ನೋಟ್​ನಲ್ಲಿ ಬರೆದಿದ್ದಾರೆ. ಹುಲ್ಲಹಳ್ಳಿ‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸ್ರು ಮುಂದಿನ ತನಿಖೆ ನೆಡೆಸುತ್ತಿದ್ದಾರೆ.

Comments (0)

Your email address will not be published. Required fields are marked *

Back to top button