ದೇವೇಗೌಡರ ಪತ್ನಿ ಚೆನ್ನಮ್ಮ ಆರೋಗ್ಯ ಸ್ಥಿತಿ ಗಂಭೀರ – ICUನಲ್ಲಿ ಚಿಕಿತ್ಸೆ ಮುಂದುವರಿಕೆ!
Deve Gowda's wife Chennamma's health condition is critical - treatment continues in ICU!

ಬೆಂಗಳೂರು : ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಅವರಿಗೆ ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ಮುಂದುವರಿದಿದೆ.
ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿರುವ ಚೆನ್ನಮ್ಮ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿನ್ನೆ ಚೆನ್ನಮ್ಮ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಕಾಣಿಸಿಕೊಂಡಿದ್ದರಿಂದ ಕುಟುಂಬಸ್ಥರಲ್ಲಿ ಆತಂಕ ಮೂಡಿತ್ತು.
ವಿಷಯ ತಿಳಿಯುತ್ತಿದ್ದಂತೆ ಆಸ್ಪತ್ರೆಗೆ ಧಾವಿಸಿದ ಪತಿ ಹೆಚ್.ಡಿ.ದೇವೇಗೌಡರು, ಪುತ್ರರಾದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರು ವೈದ್ಯರನ್ನು ಭೇಟಿ ಮಾಡಿ ಚೆನ್ನಮ್ಮ ಅವರ ಆರೋಗ್ಯ ವಿಚಾರಿಸಿದರು. ಸದ್ಯ ಆಸ್ಪತ್ರೆಯ ತಜ್ಞ ವೈದ್ಯರ ತಂಡವು ಅವರ ಆರೋಗ್ಯದ ಮೇಲೆ ನಿರಂತರ ನಿಗಾ ವಹಿಸಿದೆ.
ಚೆನ್ನಮ್ಮ ಅವರಿಗೆ ಮಣಿಪಾಲ್ ಆಸ್ಪತ್ರೆಯ ವೈದ್ಯರಾದ ಡಾ. ಸತ್ಯನಾರಾಯಣ ಮತ್ತು ಡಾ. ಸುನೀಲ್ ಕಾರಂತ್ ಅವರ ನೇತೃತ್ವದ ವೈದ್ಯಕೀಯ ತಂಡವು ಚಿಕಿತ್ಸೆ ನೀಡುತ್ತಿದೆ.




