ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಭೂ ಹಗರಣಕ್ಕೆ ಸಂಬಂಧಿಸಿದಂತೆ ಜಮೀನು ಮಾಲೀಕ ದೇವರಾಜು ಸಲ್ಲಿಸಿದ್ದ ಎರಡು ಅರ್ಜಿ ಮತ್ತು ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ. ಲೋಕಾಯುಕ್ತರ ತನಿಖಾ ವರದಿಯನ್ನು ಡಿಸೆಂಬರ್ 10ಕ್ಕೆ ಸಲ್ಲಿಸಲಿದ್ದಾರೆ.
ಮುಡಾ ಹಗರಣದ ತನಿಖಾ ಪ್ರಗತಿ ವರದಿಯನ್ನು ಇಂದು ಸಲ್ಲಿಸುವಂತೆ ಹೈಕೋರ್ಟ್ ಲೋಕಾಯುಕ್ತರಿಗೆ ಸೂಚನೆ ನೀಡಿತ್ತು. ಈ ಆದೇಶವನ್ನೂ ಪ್ರಶ್ನಿಸಿ ಜಮೀನು ಮಾಲೀಕ ದೇವರಾಜು ಅರ್ಜಿ ಸಲ್ಲಿಸಿದ್ದಾರೆ. ಹಾಗೇ, ಹಗರಣ ತನಿಖೆಗೆ ರಾಜ್ಯಪಾಲರು ನೀಡಿದ್ದ ಅನುಮತಿಯನ್ನು ಹೈಕೋರ್ಟ್ ಎತ್ತಿ ಹಿಡಿದಿತ್ತು. ಹೈಕೋರ್ಟ್ ಈ ತೀರ್ಪನ್ನೂ ಪ್ರಶ್ನಿಸಿ ದೇವರಾಜು ಅರ್ಜಿ ಸಲ್ಲಿಸಿದ್ದಾರೆ. ಈ ಎರಡೂ ಅರ್ಜಿ ವಿಚಾರಣೆಯನ್ನು ಡಿಸೆಂಬರ್ 5 ರಂದು ನಡೆಸುವುದಾಗಿ ಹೈಕೋರ್ಟ್ ವಿಭಾಗೀಯ ಪೀಠ ಹೇಳಿದೆ.
ಹೀಗಾಗಿ, ಲೋಕಾಯುಕ್ತ ಪೊಲೀಸರು ತನಿಖಾ ವರದಿಯನ್ನು ಹೈಕೋರ್ಟ್ಗೆ ಡಿಸೆಂಬರ್ 10ರಂದು ವರದಿ ಸಲ್ಲಿಸಲಿದ್ದಾರೆ. ಇನ್ನು, ಮುಡಾ ಹರಗಣದ ತನಿಖೆಯನ್ನು ಸಿಬಿಐಗೆ ನೀಡುವಂತೆ ದೂರುದಾರ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಡಿಸೆಂಬರ್ 10ರಂದು ನಡೆಸಲಿದೆ.