ಮುಂಬೈ: ಕಳೆದ ಡಿಸೆಂಬರ್‌ನಲ್ಲಿ ಬೀಡ್ ಜಿಲ್ಲೆಯಲ್ಲಿ ನಡೆದ ಸರಪಂಚ್ ಸಂತೋಷ್ ದೇಶಮುಖ್ ಕೊಲೆ ಕೇಸ್ ಗೆ ಸಂಬಂಧಿಸಿದಂತೆ ಸಚಿವ ಧನಂಜಯ್ ಮುಂಡೆ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಸರಪಂಚ್ ಕೊಲೆ ಪ್ರಕರಣದಲ್ಲಿ ತಮ್ಮ ಆಪ್ತರೊಬ್ಬರನ್ನು ಪ್ರಮುಖ ಆರೋಪಿಯನ್ನಾಗಿ ಹೆಸರಿಸಿದ ಕಾರಣ ಮಹಾರಾಷ್ಟ್ರದ ಆಹಾರ ಮತ್ತು ನಾಗರಿಕ ಸರಬರಾಜು ಖಾತೆಗಳನ್ನು ಹೊಂದಿದ್ದ ಸಚಿವ ಧನಂಜಯ್ ಮುಂಡೆ ಮಂಗಳವಾರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಸರಪಂಚ್ ಸಂತೋಷ್ ದೇಶಮುಖ್ ಅವರ ಹತ್ಯೆಯಲ್ಲಿ ಪಾತ್ರವಹಿಸಿದ್ದಕ್ಕಾಗಿ ಸಚಿವರ ಆಪ್ತ ಸಹಾಯಕ ವಾಲ್ಮಿಕ್ ಕರಡ್ ನನ್ನು ಪೋಲಿಸರು ಬಂಧಿಸಿದ್ದರು. ಬಳಿಕ ಸಿಎಂ ದೇವೇಂದ್ರ ಫಡ್ನವೀಸ್ ಧನಂಜಯ್ ಮುಂಡೆ ಅವರಿಗೆ ರಾಜಿನಾಮೆ ನೀಡುವಂತೆ ಸೂಚಿಸಿದ ಬಳಿಕ ಈ ಬೆಳವಣಿಗೆ ನಡೆದಿದೆ.