ಬೆಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣ ಸಂಬಂಧ ಎಸ್ಐಟಿ ರಚನೆ ಮಾಡಿ ಹಾಗೂ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ಸಿಎಂ ಸಿದ್ದರಾಮಯ್ಯಗೆ ನಟ ಪ್ರಕಾಶ್ ರಾಜ್ ಮನವಿ ಮಾಡಿದ್ದಾರೆ.
ಧರ್ಮಸ್ಥಳ ದೂರು ಸಂಬಂಧಿಸಿದಂತೆ ಪೊಲೀಸರು ತನಿಖೆ ಮಾಡುತ್ತಿದ್ದು ವರದಿ ಬಂದ ಬಳಿಕ ಏನು ಮಾಡಬೇಕು ಎಂಬ ಬಗ್ಗೆ ನೋಡುತ್ತೇವೆ. ಅಗತ್ಯಬಿದ್ದರೆ ಎಸ್ಐಟಿ ರಚನೆ ಮಾಡುತ್ತೆವೆ ಎಂದು ಶುಕ್ರವಾರ ಸಿಎಂ ಸಿದ್ದರಾಮಯ್ಯ ಹೇಳಿದ್ದರು.
ಈ ಬಗ್ಗೆ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿರುವ ಪ್ರಕಾಶ್ ರಾಜ್ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ನಿಮ್ಮ ಮಾತಿನ ಮೇಲೆ ನಮಗೆ ಭರವಸೆಯಿದೆ. ಆದರೆ ಈ ಧಾರುಣ ಹಂತಕರನ್ನು, ಅವರನ್ನು ಕಾಪಾಡುತ್ತಿರುವ ಹೀನ ರಾಕ್ಷಸರನ್ನು ನಂಬುವ ಹಾಗಿಲ್ಲ. ದಯವಿಟ್ಟು ತನಿಖೆ ವಿಳಂಬವಾಗಿ ಸಾಕ್ಷಾಧಾರಗಳು ನಾಶವಾಗದಂತೆ ತುರ್ತು ಕ್ರಮ ತೆಗೆದುಕೊಳ್ಳಿ, ಆದಷ್ಟು ಬೇಗ ಎಸ್ಐಟಿ ರಚನೆ ಮಾಡಿ ಮತ್ತು ಈವರೆಗೆ ದಾರಿ ತಪ್ಪಿದ ಅಧಿಕಾರಿಗಳ ಮೇಲೆ ತೀವ್ರ ಕ್ರಮ ಕೈಗೊಳ್ಳಿ ಎಂದು ನಟ ಪ್ರಕಾಶ್ ರಾಜ್ ಮನವಿ ಮಾಡಿದ್ದಾರೆ.