ಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ರಾಜ್ಯ ಸರ್ಕಾರದ ನಡವಳಿಕೆಗೆ ಮಂಜುನಾಥ ಸ್ವಾಮಿಯೇ ಶಿಕ್ಷೆ ಕೊಡುತ್ತಾನೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು ಧರ್ಮಸ್ಥಳ ಪ್ರಕರಣದಲ್ಲಿ ಸರ್ಕಾರ ನಡೆದುಕೊಂಡ ರೀತಿಗೆ ನಿಜಕ್ಕೂ ಶಿಕ್ಷೆಯಾಗಬೇಕು. ಮುಂದಿನ ದಿನಗಳಲ್ಲಿ ಈ ಸರ್ಕಾರಕ್ಕೆ ಧರ್ಮಸ್ಥಳ ಮಂಜುನಾಥ ಸ್ವಾಮಿಯೇ ಶಿಕ್ಷೆ ಕೊಡುತ್ತಾನೆ ಎಂಬ ನಂಬಿಕೆ ಇದೆ. ಪ್ರಾರಂಭಿಕ ಹಂತದಲ್ಲಿ ಯಾವ ರೀತಿ ನಡೆದುಕೊಂಡಿದ್ದಾರೆ. ನಾನು ಧರ್ಮವನ್ನು ಬೆರೆಸಲು ಹೋಗಲ್ಲ. ಆದರೆ ಸರ್ಕಾರ ನಡೆದುಕೊಂಡ ರೀತಿ ಕ್ಷೇತ್ರಕ್ಕೆ ಅವಮಾನ, ಅನುಮಾನ ಆಗೋ ರೀತಿಯಲ್ಲಿ ಸರ್ಕಾರ ಎಸ್ಐಟಿ ತನಿಖೆ ನಾಟಕ ಮಾಡಿದೆ ಎಂದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಪ್ರಕರಣವನ್ನು ಮೊದಲ ಹಂತದಲ್ಲಿ ಸರ್ಕಾರಕ್ಕೆ ದೂರು ಕೊಟ್ಟಿದ್ದು ದ್ವಾರಕನಾಥ್. ಸಿಎಂಗೆ ಅವರೇ ದೂರು ಕೊಟ್ಟರು.ಆಗ ಸಿಎಂ ದೂರು ಬಂದ ತಕ್ಷಣ ಕ್ರಮ ತೆಗೆದುಕೊಳ್ಳುವ ವಾತಾವರಣ ನಿರ್ಮಾಣ ಮಾಡಿದ್ರು ಎಂದು ಗುಡುಗಿದ್ದಾರೆ.