ಧರ್ಮಸ್ಥಳ ಪ್ರಕರಣದಲ್ಲಿ ಯೂಟ್ಯೂಬರ್ ಸಮೀರ್ ಎಂಡಿಗೆ ಬಿಗ್ ಶಾಕ್ ಎದುರಾಗಿದೆ.. ತಲೆಬುರುಡೆ ಪ್ರಕರಣ ಸೇರಿ ಹಲವು ಆರೋಪಗಳಿಗೆ ಸಂಬಂಧಿಸಿದ ತನಿಖೆಯನ್ನು ವಿಶೇಷ ತನಿಖಾ ತಂಡ ಮತ್ತಷ್ಟು ಚುರುಕುಗೊಳಿಸಿದೆ.. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೊಗಳನ್ನು ತಯಾರಿಸಿದ ಹಲವಾರು ಯೂಟ್ಯೂಬರ್‌ಗಳಿಗೆ SIT ಅಧಿಕಾರಿಗಳು ಮತ್ತೊಮ್ಮೆ ನೋಟಿಸ್ ಜಾರಿಗೊಳಿಸಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.
ಯೂಟ್ಯೂಬರ್ ಗಳಾದ ಎಂ.ಡಿ.ಸಮೀರ್, ಮುನಾಫ್, ಅಭಿಷೇಕ್ ಸೇರಿ ಕೆಲವರಿಗೆ ಎಸ್ ಐಟಿ ಅಧಿಕಾರಿಗಳು ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಇಂದು ಅವರು ಬೆಳ್ತಂಗಡಿ SIT ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದೆ.
SIT ಅಧಿಕಾರಿಗಳು ಈ ವಿಚಾರಣೆಗಾಗಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು,ಈ ಬಾರಿ ಯಾವೆಲ್ಲಾ ಪ್ರಶ್ನೆಗಳನ್ನು ಕೇಳಬೇಕು ಎಂಬುದರ ಕುರಿತು ಅಧಿಕಾರಿಗಳು ಪೂರ್ವ ಸಿದ್ಧತೆ ನಡೆಸಿದ್ದಾರೆ. ಈ ಹಿಂದಿನ ತನಿಖೆಯ ಸಂದರ್ಭದಲ್ಲಿ ಆರೋಪಿ ಚಿನ್ನಯ್ಯ ನೀಡಿದ ಹೇಳಿಕೆಗಳನ್ನು ಆಧರಿಸಿ SIT ತನ್ನ ತನಿಖೆಯನ್ನು ಮುಂದುವರಿಸಿದೆ. ಚಿನ್ನಯ್ಯ ನೀಡಿದ ಹೇಳಿಕೆಗಳಲ್ಲಿ ಕೆಲವೊಂದು ವಿಚಾರಗಳ ಬಗ್ಗೆ ಯೂಟ್ಯೂಬರ್ಗಳ ಮೂಲಕ ಮರು ಪರಿಶೀಲನೆ ನಡೆಸುವುದು ಮತ್ತು ಪ್ರಶ್ನೆಗಳನ್ನು ಕೇಳುವ ಉದ್ದೇಶದಿಂದ ಅವರನ್ನು ಕರೆಸಿಕೊಳ್ಳಲಾಗುವುದು ಎಂದು ಹೇಳಲಾಗಿದೆ.


