
ಮಂಡ್ಯ: ಧರ್ಮಸ್ಥಳದಲ್ಲಿ ಪ್ರಕರಣದಲ್ಲಿ ಎಸ್ಐಟಿ ಸಮರ್ಥವಾಗಿ ತನಿಖೆ ನಡೆಸಿದ್ರೆ ಸ್ವಾಗತ ಕೋರುತ್ತಿದ್ದೆವು. ಆದ್ರೆ ರಾಜ್ಯದ ಜನರಿಗೆ ಎಸ್ಐಟಿ ಮೇಲೆ ನಿರೀಕ್ಷೆಗಳಿಲ್ಲ . NIA ತನಿಖೆಗೆ ವಹಿಸಿದ್ರೆ ಷಡ್ಯಂತ್ರ ಬಯಲಾಗಲಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಧರ್ಮಸ್ಥಳ ಶ್ರೀ ಕ್ಷೇತ್ರದ ವಿರುದ್ಧ ಷಡ್ಯಂತ್ರ ರೂಪಿಸಲು ವಿದೇಶಿ ಫಂಡಿಂಗ್ ನಡೆದಿರುವ ಬಗ್ಗೆ ಅನುಮಾನ ಇದೆ. ಇದರ ಬಗ್ಗೆ ಸತ್ಯಾಸತ್ಯತೆ ಹೊರತರಲು NIA ತನಿಖೆ ಅವಶ್ಯಕ. ಧರ್ಮಸ್ತಳ ಪಾವಿತ್ರ್ಯತೆಯನ್ನು ಹಾಳು ಮಾಡಲು ಒಳಸಂಚು ರೂಪಿಸಿದ್ದಾರೆ ಎಂದು ಆರೋಪಿಸಿದ್ರು.
ಧರ್ಮಸ್ಥಳ ಯಾತ್ರೆಗೆ ಹಾಸನವನ್ನು ಕೇಂದ್ರ ಸ್ಥಾನವನ್ನಾಗಿ ಮಾಡಿದ್ದು, ಮುಖಂಡರು, ಕಾರ್ಯಕರ್ತರು ಹಾಸನಕ್ಕೆ ತೆರಳಿದ್ದಾರೆ. ಅಲ್ಲಿ ತಿಂಡಿ ವ್ಯವಸ್ಥೆ ಮಾಡಲಾಗಿದೆ. ನಂತರ ಧರ್ಮಸ್ಥಳ ನೇತ್ರಾವತಿಗೆ ತೆರಳಿ, ಅಲ್ಲಿ ಸ್ನಾನ ಮಾಡಿದ ಬಳಿಕ ಅಲ್ಲಿಂದ ಮುಂಜುನಾಥ ಸ್ವಾಮಿ ದೇವಸ್ಥಾನದವರೆಗೆ ಪಾದಯಾತ್ರೆ ಮಾಡುತ್ತೇವೆ. ಈ ಯಾತ್ರೆಯಲ್ಲಿ ಜೆಡಿಎಸ್ ಲೋಕಸಭಾ ಸದಸ್ಯರು, ಶಾಸಕರು, ಮಾಜಿ ಸಂಸದರು, ಮಾಜಿ ಸಚಿವರು, ಭಕ್ತರು ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಲಿದ್ದಾರೆ ಎಂದ್ರು.
ಧರ್ಮಸ್ಥಳದ ಬಗ್ಗೆ ಕೆಲವರು ಅಪಪ್ರಚಾರ ಮಾಡುತ್ತಿದ್ದು, ಹೆಚ್.ಡಿ.ಕುಮಾರಸ್ವಾಮಿ ಸೂಚನೆಯೆಂತೆ ಆ. 31 ರಂದು ಜೆಡಿಎಸ್ ವತಿಯಿಂದ ಧರ್ಮಸ್ಥಳ ಸತ್ಯಯಾತ್ರೆ ಹಮ್ಮಿಕೊಂಡಿದ್ದೇವೆ. ಇದರಲ್ಲಿ ಯಾವುದೇ ರಾಜಕೀಯವನ್ನು ಬೆರೆಸುತ್ತಿಲ್ಲ ಎಂದು ಹೇಳಿದ್ರು.
ಇನ್ನು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಆರೋಗ್ಯದ ಸಮಸ್ಯೆ ಬಗ್ಗೆ ಪ್ರತಿಕ್ರಿಯಿಸಿದ ಅವರು ಅಭಿಮಾನಿಗಳು ಹಾಗೂ ಸಂಘದ ಕಾರ್ಯಕರ್ತರಲ್ಲಿ ಆತಂಕ ಮೂಡಿದ್ದು ಯಾರು ಭಯಪಡುವ ಅಗತ್ಯವಿಲ್ಲ. ಕುಮಾರಣ್ಣ ಆರೋಗ್ಯದಲ್ಲಿ ಏರುಪೇರಾಗಿದ್ದು ನಿಜ. ಆದರೆ ಯಾರು ಆತಂಕಪಡುವ ಅಗತ್ಯವಿಲ್ಲ ಎಂದ್ರು.




