ಸಿನಿಮಾ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲೇಬೇಕು – ಸಿಜೆಪಿ ಬೆಂಬಲಕ್ಕೆ ನಿಂತ ನಟಿ ಜ್ಯೋತಿಕಾ!

Dharmendra Pradhan should resign - Actress Jyothika supports CJP!

ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್ ಜನತಾ ಪಕ್ಷಕ್ಕೆ ಸೆಲೆಬ್ರೆಟಿಗಳೂ ಬೆಂಬಲ ವ್ಯಕ್ತಪಡಿಸಿದ್ದಾರೆ. ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ನಟಿ ಜ್ಯೋತಿಕಾ ಒತ್ತಾಯಿಸಿದ್ದು, ವಿದ್ಯಾರ್ಥಿಗಳು ಮತ್ತು ದೇಶದ ಭವಿಷ್ಯದ ಜೊತೆಗಿದ್ದೇನೆ ಎಂದು ಹೇಳಿದ್ದಾರೆ.

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು, ನಾನು ವಿದ್ಯಾರ್ಥಿಗಳು ಮತ್ತು ದೇಶದ ಭವಿಷ್ಯದೊಂದಿಗೆ ಜವಾಬ್ದಾರಿಯುತವಾಗಿ ನಿಲ್ಲುತ್ತೇನೆ. ನಾನು ವಿದ್ಯಾರ್ಥಿಗಳು ಮತ್ತು ನಮ್ಮ ದೇಶದ ಭವಿಷ್ಯದ ಪರವಾಗಿದ್ದೇನೆ. ನಾನು ಹೊಣೆಗಾರಿಕೆಯ ಪರವಾಗಿದ್ದೇನೆ. ನಾನು ಪ್ರಜಾಪ್ರಭುತ್ವ ಭಾರತದ ಪರವಾಗಿದ್ದೇನೆ ಎಂದರು. 

ಸೋನಮ್ ವಾಂಗ್ಚುಕ್, ಅಭಿಜೀತ್ ದೀಪ್ಕೆ, ಸೌರವ್ ದಾಸ್ ಅವರೇ ತಾಯಂದಿರಾಗಿ ನಾವು ನಮ್ಮ ಮಕ್ಕಳನ್ನು ನಿಮ್ಮಂತೆ ಬೆಳೆಸಲು ಬಯಸುತ್ತೇವೆ. ನಾವು ಭಾರತ ಎಂದು ನೀವು ಸಾಬೀತುಪಡಿಸಿದ್ದೀರಿ, ನಮ್ಮನ್ನು ನಿರ್ಭೀತರನ್ನಾಗಿ ಮಾಡಿದ್ದಕ್ಕಾಗಿ ಧನ್ಯವಾದ ಎಂದು ನಟಿ ಜ್ಯೋತಿಕಾ ಇನ್‌ಸ್ಟಾಗ್ರಾಮ್‌ನಲ್ಲಿ ಬರೆದಿದ್ದಾರೆ.

Comments (0)

Your email address will not be published. Required fields are marked *

Back to top button