ಮುಂಬೈ: ಬಾಲಿವುಡ್ ನಟ ಧರ್ಮೇಂದ್ರ ನಿಧನರಾಗಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾನದಲ್ಲಿ ಹಾಗೂ ಮಾಧ್ಯಮಗಳಲ್ಲಿ ಹರಿದಾಡಿದ್ದು, ಈ ಸುದ್ದಿ ಸಂಪೂರ್ಣ ಸುಳ್ಳು ಎಂದು ಪತ್ನಿ ಹಾಗೂ ನಟಿ ಹೇಮಾಮಾಲಿನಿ ಸ್ಪಷ್ಟನೆ ನೀಡಿದ್ದಾರೆ..
ಧರ್ಮೇಂದ್ರ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವೆಂಟಿಲೇಟರ್ ಸಹಾಯದಿಂದ ಉಸಿರಾಡುತ್ತಿರುವ ಧರ್ಮೇಂದ್ರ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರೆದಿದೆ. ಆದರೆ ಕೆಲ ಮಾಧ್ಯಮಗಳು ಧರ್ಮೇಂದ್ರ ನಿಧನ ಹೊಂದಿದ್ದಾರೆ ಎಂದು ವರದಿ ಪ್ರಸಾರ ಮಾಡಿದ್ದವು.
ಇದನ್ನು ಗಮನಿಸಿ ಸಾಮಾಜಿಕ ಜಾಲತಾಣಗಳಲ್ಲಿಯೂ ಸಹ ಅಭಿಮಾನಿಗಳು ಶೋಕ ಸಂದೇಶ ಹಂಚಿಕೊಳ್ಳಲು ಆರಂಭಿಸಿದ್ದರು. ಆದರೆ ಈ ವಿಷಯ ಧರ್ಮೇಂದ್ರ ಕುಟುಂಬದವರಿಗೆ ತೀವ್ರ ನೋವುಂಟು ಮಾಡಿದೆ. ವಿಶೇಷವಾಗಿ ನಟಿ, ಸಂಸದೆ ಹೇಮಾಮಾಲಿನಿ ಅವರಂತೂ ಮಾಧ್ಯಮಗಳು ಹಾಗೂ ಸುಳ್ಳು ಸುದ್ದಿ ಹರಡುತ್ತಿರುವವರ ಮೇಲೆ ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದ್ದಾರೆ.


