#Exclusive NewsTop Newsದೇಶ/ವಿದೇಶಸುದ್ದಿ

ಭಾರತ-ಪಾಕ್ ಯುದ್ಧದಲ್ಲಿ ಅಲ್ಲು ಹೋರಾಡಿ ದೇಶವನ್ನು ಗೆಲ್ಲಿಸಿದ್ದಾರಾ ?: ರೇವಂತ್‌ ಕಿಡಿ

 

ಹೈದರಾಬಾದ್: ನಟ ಅಲ್ಲು ಅರ್ಜುನ್ ಬಂಧನದ ಬೆನ್ನಲ್ಲೇ ಅವರ ನಡೆಗಳನ್ನು ಪ್ರಶ್ನಿಸಿದ್ದ ತೆಲಂಗಾಣ ಸಿಎಂ ರೇವಂತ್‌ ರೆಡ್ಡಿ ಮತ್ತೆ ವಾಗ್ದಾಳಿ ನಡೆಸಿದ್ದು, ‘ಅಲ್ಲು ಅರ್ಜುನ್ ಒಬ್ಬ ನಟ. ಗಡಿಯಲ್ಲಿ ಯಾವುದಾದರೂ ಭಾರತ- ಪಾಕಿಸ್ತಾನ ಯುದ್ಧದಲ್ಲಿ ಹೋರಾಡಿ ದೇಶವನ್ನು ಗೆಲ್ಲಿಸಿದ್ದಾರಾ?’ ಎಂದು ಪ್ರಶ್ನಿಸಿದ್ದಾರೆ. ಆಜ್ ತಕ್ ಸುದ್ದಿವಾಹಿನಿಯ ಸಂದರ್ಶನದಲ್ಲಿ ಮಾತನಾಡಿದ ರೆಡ್ಡಿ ಅಲ್ಲು ಅರ್ಜುನ್ ಬಂಧನದ ಕುರಿತು ಕೇಳಲಾದ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತ, ‘ಅಲ್ಲು ಅರ್ಜುನ್ ಸಿನಿಮಾ ನಟ. ಅವರು ಗಡಿಯಲ್ಲಿ ಭಾರತ- ಪಾಕಿಸ್ತಾನ ಯುದ್ಧ ಮಾಡಿ ಗೆದ್ದಿದ್ದಾರಾ? ಅವರು ಸಿನಿಮಾ ಮಾಡಿ, ಹಣಕಟ್ಟಿಕೊಂಡು ಮನೆಗೆ ಹೋದರು’ ಎಂದರು. ಈ ಮೂಲಕ ಅಲ್ಲು ದುಡ್ಡು ಮಾಡಿಕೊಂಡರೆ ಜನರಿಗೇನು ಸಿಕ್ಕಿತು ಎಂಬರ್ಥದಲ್ಲಿ ಪ್ರಶ್ನಿಸಿದರು. ಅಲ್ಲದೇ, ‘ಸಂವಿಧಾನ ಎಲ್ಲರಿಗೂ ಒಂದೇ. ಒಬ್ಬ ಮಹಿಳೆ ಅವರ ಚಿತ್ರ ಪ್ರದರ್ಶನದ ವೇಳೆ ನಿರ್ಲಕ್ಷ್ಯದಿಂದ ಸಾವನ್ನಪ್ಪಿದ್ದರೆ ಕ್ರಮ ಕೈಗೊಳ್ಳದೇ ಸುಮ್ಮನೇ ಕೂರಬೇಕಿತ್ತೇ?’ ಎಂದೂ ಪ್ರಶ್ನಿಸಿದರು

Comments (0)

Your email address will not be published. Required fields are marked *

Back to top button