Thursday, November 20, 2025
19.5 C
Bengaluru
Google search engine
LIVE
ಮನೆರಾಜಕೀಯಬಿಜೆಪಿ ತನ್ನ ಅಧಿಕಾರದ ಅವಧಿಯಲ್ಲಿ ಯಾವುದಾದರೂ ಪ್ರಕರಣವನ್ನು ಸಿಬಿಐಗೆ ವಹಿಸಿದೆಯೇ? - ಸಿದ್ದರಾಮಯ್ಯ

ಬಿಜೆಪಿ ತನ್ನ ಅಧಿಕಾರದ ಅವಧಿಯಲ್ಲಿ ಯಾವುದಾದರೂ ಪ್ರಕರಣವನ್ನು ಸಿಬಿಐಗೆ ವಹಿಸಿದೆಯೇ? – ಸಿದ್ದರಾಮಯ್ಯ

ಬೀದರ್ :  ಹುಬ್ಬಳಿಯ ನೇಹಾ ಹೀರೆಮಠ  ಕೊಲೆ ಪ್ರಕರಣವನ್ನು ಸರ್ಕಾರ ತೀವ್ರವಾಗಿ ಖಂಡಿಸುತ್ತದೆ ಹಾಗೂ  ಆರೋಪಿಗೆ ಘೋರ ಶಿಕ್ಷೆ ವಿಧಿಸಲು ಸಿಐಡಿ ತನಿಖೆ ಚುರುಕುಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು. ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಬಿಜೆಪಿ ಒತ್ತಾಯ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಬಿಜೆಪಿ ತನ್ನ ಅಧಿಕಾರದ ಅವಧಿಯಲ್ಲಿ  ಯಾವುದಾದರೂ ಪ್ರಕರಣವನ್ನು ಸಿಬಿಐ ವಹಿಸಿದೆಯೇ? ಎಂದು ಪ್ರಶ್ನಿಸಿದರು. ನಾನು ಹಿಂದೆ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಪ್ರಕರಣಗಳನ್ನು ಸಿಬಿಐ ಗೆ ವಹಿಸಿದ್ದೇನೆ. ಅವರಿಗೆ ಕೇಳಲು ಯಾವ ನೈತಿಕ ಹಕ್ಕಿದೆ. ಇದರಲ್ಲಿ ರಾಜಕೀಯ ಮಾಡಬಾರದು. ನೇಹಾ ಹತ್ಯೆ ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಸರ್ಕಾರಿ ಅಭಿಯೋಜಕರೊಂದಿಗೆ ಮಾತನಾಡಿದ್ದು, ಸರ್ಕಾರ ಈಗಾಗಲೇ ಆರೋಪಿಯನ್ನು ಬಂಧಿಸಿದೆ. ಸಿಐಡಿ ತನಿಖೆ ನಡೆದಿದ್ದು ಆರೋಪಪಟ್ಟಿಯನ್ನು ತಯಾರಿಸಲಿದೆ ಎಂದರು.

ನೇಹಾ ತಂದೆಯವರು ತಮ್ಮ ಮಗಳ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷವೇ ರಾಜಕೀಯ ಮಾಡುತ್ತಿದೆ ಹಾಗೂ ಬಿಜೆಪಿಯವರ ಇದೇ ಧೋರಣೆಯನ್ನು ಹೊಂದಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ನೇಹಾ ಕೊಲೆ ಅನ್ಯಾಯವಾದುದು. ಅದನ್ನು ನಾವು ಖಂಡಿಸಿದ್ದೇವೆ. ಇತರೆ ಪಕ್ಷಗಳು ಅದನ್ನು ರಾಜಕೀಯವಾಗಿ ಬಳಸಿಕೊಳ್ಳಬಾರದು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಕೊಡಿಸುವ ಪ್ರಮಾಣಿಕ ಪ್ರಯತ್ನವನ್ನು ಸರ್ಕಾರ ಮಾಡುತ್ತಿದೆ ಎಂದರು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments