ಶಿವಮೊಗ್ಗ: ಬಜೆಟ್ ಅಧಿವೇಶನದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರದಿಂದ ಕೆಳಗಿಳಿಯಬಹುದು ಎಂದು ಹೇಳಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ತಮ್ಮ ಮುಖ್ಯಮಂತ್ರಿ ಸ್ಥಾನವನ್ನು ಉಳಿಸಿಕೊಳ್ಳಲು ಸಿದ್ದರಾಮಯ್ಯ ರಾಜಕೀಯ ತಂತ್ರಗಾರಿಕೆ ನಡೆಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಶನಿವಾರ ಹೇಳಿದರು.
ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಅನುಪಸ್ಥಿತಿಯಲ್ಲಿ ಸಭೆ ನಡೆಸಲಾಗಿದೆ. ಇದು ಸಿದ್ದರಾಮಯ್ಯ ಅವರ ಸ್ಥಾನವನ್ನು ಬಲಪಡಿಸುವ ಪ್ರಯತ್ನವನ್ನು ಸೂಚಿಸುತ್ತದೆ ಎಂದು ಹೇಳಿದರು.
ನಾನು ಸಿದ್ದರಾಮಯ್ಯ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂದಾಗ ವಿಜಯೇಂದ್ರ ಭವಿಷ್ಯ ಹೇಳ್ತಾರಾ ಎಂದು ಸಿದ್ದರಾಮಯ್ಯ ಹೇಳಿದ್ದರು. ನಾನು ಹೇಳಿದ್ದು ಏನು ಎಂದು ಮುಂದೆ ಗೊತ್ತಾಗುತ್ತದೆ. ಔತಣಕೂಟದಿಂದ ಎಲ್ಲವು ಸರಿ ಇಲ್ಲ ಎಂದು ತಿಳಿದು ಬರುತ್ತದೆ. ಸಿದ್ದರಾಮಯ್ಯ ಬಜೆಟ್ ನಂತರ ರಾಜೀನಾಮೆ ನೀಡುತ್ತಾರೆ ಎಂಬ ಅಂಶ ಚರ್ಚೆಗೆ ಬಂದಿದೆ.
ಇದರಿಂದ ಔತಣಕೂಟದ ಮೂಲಕ ತಮ್ಮ ರಾಜಕೀಯ ದಾಳ ಬಿಟ್ಟಿದ್ದಾರೆ. ಇಲ್ಲಿ ಸಿದ್ದರಾಮಯ್ಯ ಸಿಎಂ ಸ್ಥಾನ ಬಿಡಲು ತಯಾರಿಲ್ಲ. ಆದರೆ, ಸಿದ್ದರಾಮಯ್ಯ ಅವರನ್ನು ಮುಂದುವರೆಸಲು ಅವರ ವಿರೋಧಿ ತಂಡ ಬಿಡುತ್ತಿಲ್ಲ. ಕಾಂಗ್ರೆಸ್ ಸರ್ಕಾರದಲ್ಲಿ ಸಿದ್ದು v/s ಯುದ್ದ ಎಂಬಾಂತೆ ಆಗಿದೆ ಎಂದು ವ್ಯಂಗ್ಯವಾಡಿದರು.