Tuesday, February 10, 2026
16.6 C
Bengaluru
Google search engine
LIVE
ಮನೆ#Exclusive NewsTop Newsಆಸ್ಪತ್ರೆಯಿಂದ ಡಿಸ್ಚಾರ್ಜ್; ನನ್ನ ಆರೋಗ್ಯಕ್ಕಾಗಿ ಹಾರೈಸಿದ ಎಲ್ಲರಿಗೂ ಧನ್ಯವಾದ- ಖರ್ಗೆ

ಆಸ್ಪತ್ರೆಯಿಂದ ಡಿಸ್ಚಾರ್ಜ್; ನನ್ನ ಆರೋಗ್ಯಕ್ಕಾಗಿ ಹಾರೈಸಿದ ಎಲ್ಲರಿಗೂ ಧನ್ಯವಾದ- ಖರ್ಗೆ

ಬೆಂಗಳೂರು: ಉಸಿರಾಟದ ಸಮಸ್ಯೆಯಿಂದ ಬೆಂಗಳೂರಿನ ಎಂ. ಎಸ್​​​ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಗುಣಮುಖರಾಗಿ ನಿನ್ನೆ ಸಂಜೆ ಆಸ್ಪತ್ರೆಯಿಂದ ಬಿಡಿಗಡೆಯಾಗಿದ್ದಾರೆ.. ಖರ್ಗೆ ಅವರಿಗೆ ಬುಧವಾರ ಶಸ್ತ್ರಚಿಕಿತ್ಸೆ ಮೂಲಕ ಪೇಸ್ ಮೇಕರ್​​ ಅನ್ನು ಯಶಸ್ವಿಯಾಗಿ ಅಳವಡಿಸಲಾಗಿದೆ..

ಶೀಘ್ರದಲ್ಲೇ ಚೇತರಿಸಿಕೊಂಡ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಪ್ರಸ್ತುತ ಖರ್ಗೆ ಆರೋಗ್ಯವಾಗಿದ್ದು, ಮನೆಗೆ ತೆರಳಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಶೀಘ್ರದಲ್ಲೇ ಅವರು ಕರ್ತವ್ಯಕ್ಕೆ ಮರಳಲಿದ್ದಾರೆ. ಖರ್ಗೆ ಅವರ ಆರೋಗ್ಯದ ಕುರಿತು ಕಾಂಗ್ರೆಸ್ ಮಾಹಿತಿ ಹಂಚಿಕೊಂಡಿದೆ. ಖರ್ಗೆ ಜೀ ಚೆನ್ನಾಗಿದ್ದಾರೆ. ನಿಮ್ಮೆಲ್ಲರ ಶುಭ ಹಾರೈಕೆ ಮತ್ತು ಬೆಂಬಲಕ್ಕೆ ಧನ್ಯವಾದಗಳು. ಶೀಘ್ರವೇ ತಮ್ಮ ಚಟುವಟಿಕೆಗಳನ್ನು ಪುನಾರಂಭಿಸುವ ನಿರೀಕ್ಷೆಯಿದೆ ಎಂದು ಕಾಂಗ್ರೆಸ್ ಪ್ರಕಟಣೆ ತಿಳಿಸಿದೆ.

ನನ್ನ ಆರೋಗ್ಯಕ್ಕಾಗಿ ಶುಭಾಶಯಗಳ ಮಹಾಪೂರವನ್ನೇ ಹಾರೈಸಿದ ಕಾಂಗ್ರೆಸ್ ಕಾರ್ಯಕರ್ತರು, ನಾಯಕರು ಮತ್ತು ಬೆಂಬಲಿಗರಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳು. ನನ್ನ ಹೃತ್ಪೂರ್ವಕ ಕೃತಜ್ಞತೆಗಳು. ನಾನು ಶೀಘ್ರದಲ್ಲೇ ನನ್ನ ಕೆಲಸ ಕಾರ್ಯಗಳನ್ನು ಪ್ರಾರಂಭಿಸಲು ಉದ್ದೇಶಿಸಿದ್ದೇನೆ ಎಂದು ಮಲ್ಲಿಕಾರ್ಜುನ ಖರ್ಗೆ ಟ್ವೀಟ್ ಮಾಡಿದ್ದಾರೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments