Monday, June 23, 2025
26.6 C
Bengaluru
Google search engine
LIVE
ಮನೆUncategorizedನಿರೀಕ್ಷಣಾ ಜಾಮೀನು ಅರ್ಜಿ ವಜಾ ಹೆಚ್. ​ಡಿ ರೇವಣ್ಣ ವಶ

ನಿರೀಕ್ಷಣಾ ಜಾಮೀನು ಅರ್ಜಿ ವಜಾ ಹೆಚ್. ​ಡಿ ರೇವಣ್ಣ ವಶ

ಬೆಂಗಳೂರು: ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಮಾಜಿ ಸಚಿವ ಹೆಚ್. ​ಡಿ ರೇವಣ್ಣವರನ್ನು ಎಸ್​ಐಟಿ ಅಧಿಕಾರಿಗಳು ಶನಿವಾರ ವಶಕ್ಕೆ ಪಡೆದುಕೊಂಡಿದ್ದಾರೆ.

ಬೆಂಗಳೂರಿನ ಪದ್ಮನಾಭನಗರದ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ನಿವಾಸಕ್ಕೆ ತೆರಳಿದ ಎಸ್​ಐಟಿ ಅಧಿಕಾರಿಗಳು 1 ಗಂಟೆಗಳ ಕಾಲ ಕಾದು ರೇವಣ್ಣ ಅವರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಮೈಸೂರಿನ ಕೆಆರ್​ ನಗರ ಪೊಲೀಸ್ ಠಾಣೆಯಲ್ಲಿ ಅಪಹರಣ ಸಂಬಂಧ ಸಂತ್ರಸ್ತೆಯ ಪುತ್ರ ದೂರು ದಾಖಲಿಸಿದ್ದರು ಎಂದು ಹೇಳಲಾಗಿದೆ.

ದೂರಿನ ಅನ್ವಯ ಎಫ್ಐಆರ್ ದಾಖಲಾಗಿತ್ತು. ಕೆಲ ಗಂಟೆಗಳ ಹಿಂದೆಯಷ್ಟೇ ರೇವಣ್ಣನ ಆಪ್ತನ ತೋಟದ ಮನೆಯಲ್ಲಿದ್ದ ಸಂತ್ರಸ್ತೆಯನ್ನು ರಕ್ಷಣೆ ಮಾಡಲಾಗಿದೆ. ಸಂತ್ರಸ್ತೆಯನ್ನು ಬೆಂಗಳೂರಿಗೆ ಕರೆದುಕೊಂಡು ಬರಲಾಗುತ್ತಿದೆ.

ಫ್ರೀಡಂ ಟಿವಿಯಲ್ಲಿ ಜಾಹೀರಾತು ನೀಡಲು
ಈ ನಂಬರ್ ಗೆ ಸಂಪರ್ಕಿಸಿ
Phone Number : +91 9164072277
Email id : salesatfreedomtv@gmail.com

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments