Thursday, August 21, 2025
26.3 C
Bengaluru
Google search engine
LIVE
ಮನೆ#Exclusive Newsಬಿ.ಎಲ್​ ಸಂತೋಷ್​ ಬಗ್ಗೆ ಅವಹೇಳನಕಾರಿ ಹೇಳಿಕೆ; ಮಹೇಶ್​ ಶೆಟ್ಟಿ ತಿಮರೋಡಿ ಬಂಧನ

ಬಿ.ಎಲ್​ ಸಂತೋಷ್​ ಬಗ್ಗೆ ಅವಹೇಳನಕಾರಿ ಹೇಳಿಕೆ; ಮಹೇಶ್​ ಶೆಟ್ಟಿ ತಿಮರೋಡಿ ಬಂಧನ

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್​ ಸಂತೋಷ್​ ಅವರ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿರುವ ಆರೋಪಕ್ಕೆ ಸಂಬಂಧಿಸಿ ಸೌಜನ್ಯ ಪರ ಹೋರಾಟಗಾರ, ಮಹೇಶ್​​ ಶೆಟ್ಟಿ ತಿಮರೋಡಿ ಅವರನ್ನು ಬ್ರಹ್ಮಾವರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಬಿ.ಎಲ್​ ಸಂತೋಷ್​ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ತೇಜೋವಧೆ ಮಾಡಿ ಬೇರೆ ಬೇರೆ ಧರ್ಮ ಹಾಗೂ ಸಮುದಾಯಗಳ ನಡುವೆ ದ್ವೇಷ ಭಾವನೆ ಮೂಡುವಂತೆ ಮಾಡಿದ್ದಾರೆ ಎಂದು ಆರೋಪಿ ಉಡುಪಿ ಗ್ರಾಮಾಂತರ ಬಿಜೆಪಿ ಮಂಡಲ ಅಧ್ಯಕ್ಷ ರಾಜೀವ್​ ಕುಲಾಲ್​ ದೂರು ದಾಖಲಿಸಿದ್ದಾರೆ.

ಅದರಂತೆ ಪ್ರಕರಣ ದಾಖಲಿಸಿಕೊಂಡಿರುವ ಬ್ರಹ್ಮಾವರ ಪೊಲೀಸರು ವಿಚಾರಣೆ ಹಾಜರಾಗುವಂತೆ ತಿಮರೋಡಿಗೆ ಎರಡು ಬಾರಿ ನೋಟಿಸ್ ಕಳುಹಿಸಿದ್ದರು ಎನ್ನಲಾಗಿದೆ. ವಿಚಾರಣೆಗೆ ಹಾಜರಾಗದ ಹಿನ್ನೆಲೆ ಬ್ರಹ್ಮಾವರ ಪೊಲೀಸರು ಇಂದು ಮುಂಜಾಣೆ ಉಜಿರೆಯ ತಿಮರೋಡಿಯಲ್ಲಿರುವ ಮಹೇಶ್ ಶೆಟ್ಟಿ ಮನೆಗೆ ತೆರಳಿ ಠಾಣೆ ಕರೆದೊಯ್ದಿದ್ದರು. ಬಳಿಕ ವಶಕ್ಕೆ ಪಡೆದು ಮಧ್ನಾಹ್ಯದಿಂದ ಸಂಜೆಯವರೆಗೆ ವಿಚಾರಣೆ ನಡೆಸಿದ ಪೊಲೀಸರು ಬಂಧಿಸಿದ್ದಾರೆ.

ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ತಪಾಸಣೆ ಮಾಡಿದ ಬಳಿಕ ಬ್ರಹ್ಮಾವರ ಕೋರ್ಟ್​ ಮುಂದೆ ಹಾಜರುಪಡಿಸಿದ್ದಾರೆ. ಮಹೇಶ್​ ಶೆಟ್ಟಿ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಅರ್ಜಿ ತಿರಸ್ಕರಿಸಿ ಆಗಸ್ಟ್ 23ರವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಿದೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments