ಬೆಂಗಳೂರು: ಸ್ಯಾಂಡಲ್‌ವುಡ್ ನಟ ಯುವ ರಾಜ್‌ಕುಮಾರ್ ಸಲ್ಲಿಸಿದ್ದ ವಿಚ್ಚೇದನ ಅರ್ಜಿ ವಿಚಾರಣೆ ಆಗಸ್ಟ್ 23ಕ್ಕೆ ಮುಂದೂಡಿಕೆಯಾಗಿದೆ.
ಇಂದು 1 ಹೆಚ್ಚುವರಿ ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶೆ ಕಲ್ಪನಾ ಅವರಿದ್ಧ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಿತು. ಈ ವೇಳೆ ವಿಚ್ಚೇದನ ಅರ್ಜಿಗೆ ಯುವ ಪತ್ನಿ ಶ್ರೀದೇವಿ ಭೈರಪ್ಪ ಅವರ ಪರ ವಕೀಲರು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ ನೀಡುವಂತೆ ಮನವಿ ಮಾಡಿದರು.
ಈ ಮನವಿಗೆ ನ್ಯಾಯಾಧೀಶರು, ಇದು ಕೌಟುಂಬಿಕ ಕಲಹವಾಗಿರುವ ಕಾರಣ ಮಿಡಿಯೇಷನ್ ಕೌನ್ಸಿಲಿಂಗ್ ಮುಕ್ತಾಯವಾಗಲಿ. ಮೊದಲು ಕೌನ್ಸಿಲಿಂಗ್ ಮುಕ್ತಾಯವಾಗಬೇಕು.ಕೌನ್ಸಿಲಿಂಗ್ ಮುಕ್ತಾಯದ ಬಳಿಕ ಇಬ್ಬರ ತೀರ್ಮಾನ ಕೇಳಬೇಕು. ಬಳಿಕ ವಿಚ್ಚೇದನದ ಆಕ್ಷೇಪಣೆ ಕೇಳುವುದಾಗಿ ನ್ಯಾಯಾಧೀಶರು ಹೇಳಿದರು.
ಅಂತಿಮವಾಗಿ ಕೋರ್ಟ್ ಆಗಸ್ಟ್ 23ಕ್ಕೆ ಮಿಡಿಯೇಷನ್ ದಿನಾಂಕ ನಿಗದಿ ಮಾಡಿ ವಿಚಾರಣೆ ಮುಂದೂಡಿತು.
ಜಾಹೀರಾತು ನೀಡಲು ಸಂಪರ್ಕಿಸಿ
Phone Number : +91-9164072277
Email id : salesatfreedomtv@gmail.com