Top Newsರಾಜ್ಯ

ಡಿಕೆಶಿ ಸಿಎಂ ಆಗೇ ಆಗ್ತಾರೆ – ಅಜ್ಜಯ್ಯ ಸ್ವಾಮೀಜಿ ಭವಿಷ್ಯ

ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯನ್ನಾಗಿಸಿ, ಅವರಿಂದಲೇ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲ್ಲೂಕಿನ ಮುಕ್ತಿಮಂದಿರ ಧರ್ಮಕ್ಷೇತ್ರದಲ್ಲಿ ತ್ರಿಕೋಟಿ ಶಿವಲಿಂಗ ಸ್ಥಾಪಿಸುವೆ ಎಂದು ನೊಣವಿನಕೆರೆ ಕಾಡಸಿದ್ದೇಶ್ವರಮಠದ ಕರಿವೃಷಭ ದೇಶೀಕೇಂದ್ರ ಶಿವಯೋಗೀಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯನ್ನಾಗಿಸುವುದು ಶತಸಿದ್ದ. ಕಳೆದ ವರ್ಷ ಅಕ್ಟೋಬರ್‌ನಲ್ಲಿ ಹೇಳಿದ್ದನ್ನೇ ಮತ್ತೊಮ್ಮೆ ಹೇಳುತ್ತಿರುವೆ ಎಂದರು.

ವೀರಗಂಗಾಧರ ಜಗದ್ಗುರುಗಳ ಮೇಲೆ ಅಪಾರ ಭಕ್ತಿ ನಂಬಿಕೆ ಹೊಂದಿರುವ ಶಿವಕುಮಾ‌ರ್ ಅವರು, ನೆನಗುದಿಗೆ ಬಿದ್ದಿರುವ ತ್ರಿಕೋಟಿ ಲಿಂಗ ಸ್ಥಾಪನೆಗೆ ಬೇಕಾದ, ಕೋಟ್ಯಂತರ ರೂಪಾಯಿ ಅನುದಾನ ಕಲ್ಪಿಸಿದ್ದಾರೆ. ಆದಷ್ಟು ಬೇಗ ಶಿವಕುಮಾರ್ ಮುಖ್ಯಮಂತ್ರಿ ಆಗುವರು ಎಂದು ಕಾಡಸಿದ್ದೇಶ್ವರಮಠದ ಕರಿವೃಷಭ ದೇಶೀಕೇಂದ್ರ ಶಿವಯೋಗೀಶ್ವರ ಶಿವಾಚಾರ್ಯ ಸ್ವಾಮೀಜಿ ಭವಿಷ್ಯ ಹೇಳಿದರು

Comments (0)

Your email address will not be published. Required fields are marked *

Back to top button