Freedom TV

ಪ್ರತಿ ತಿಂಗಳು 2 ನೇ ಮತ್ತು 4 ನೇ ಶನಿವಾರ ಡಿಸಿಎಂ ಡಿ ಕೆ ಶಿವಕುಮಾರ್ ಅವರಿಂದ ಕನಕಪುರ ಭೇಟಿ

ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಪ್ರತಿ ತಿಂಗಳು 2 ನೇ ಮತ್ತು 4 ನೇ ಶನಿವಾರ ಕನಕಪುರ ವಿಧಾನಸಭೆ ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ.

ಆ ದಿನಗಳಂದು ಕ್ಷೇತ್ರದ ಜನರ ಸಮಸ್ಯೆ, ಅಹವಾಲು ಆಲಿಸಲಿದ್ದಾರೆ.

ಕನಕಪುರ ಕ್ಷೇತ್ರದ ಜನರು ತಮ್ಮನ್ನು ಭೇಟಿ ಮಾಡಲು ಬೆಂಗಳೂರಿಗೆ ಬರುವುದು ಬೇಡ. ತೊಂದರೆ ತೆಗೆದುಕೊಳ್ಳುವುದು ಬೇಡ. ನಾನೇ ಕನಕಪುರಕ್ಕೆ ಬಂದು ನಿಮ್ಮ ಕಷ್ಟ-ಸುಖ ವಿಚಾರಿಸಿ, ಅಹವಾಲು ಸ್ವೀಕರಿಸಲಿದ್ದೇನೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ

.

Comments (0)

Your email address will not be published. Required fields are marked *

Back to top button