Top Newsರಾಜಕೀಯ

ಸಿಎಂ ಸಿದ್ದರಾಮಯ್ಯ ಹುಟ್ಟುಹಬ್ಬಕ್ಕೆ ಡಿಕೆಶಿ ಶುಭಾಶಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಇಂದು 77ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ಸಂಧರ್ಭದಲ್ಲಿ ಅವರಿಗೆ ಕಾಂಗ್ರೆಸ್​ ನಾಯಕರ ಸೇರಿದಂತೆ ಗಣ್ಯರು  ಶುಭಾಶಯ ಕೋರಿದ್ದಾರೆ. ಡಿಸಿಎಂ ಡಿಕ ಶಿವಕುಮಾರ್​ ಕೂಡ ಶುಭಾಶಯ ಕೋರಿದ್ದಾರೆ.

ಈ ಬಗ್ಗೆ ಟ್ವೀಟ್​ ಮೂಲಕ ಮಾಹಿತಿ ಹಂಚಿಕೊಂಡಿರುವ ಅವರು ಕನ್ನಡಿಗರ ಹಿತವನ್ನು ಕಾಪಾಡಲು, ಕರ್ನಾಟಕದ ಕಲ್ಯಾಣಕ್ಕಾಗಿ ನಮ್ಮ ‘ಕೈ’ ಹೀಗೆ ಜೊತೆಯಾಗಿರಲಿದೆ. ದೇವರು ತಮಗೆ ಉತ್ತಮ ಆಯುರಾರೋಗ್ಯ ನೀಡಿ ಕಾಪಾಡಲಿ ಎಂದು ಶುಭ ಹಾರೈಸಿದ್ದಾರೆ.

ರಾಜ್ಯದ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರಿಗೆ ಜನ್ಮದಿನದ ಶುಭಾಶಯಗಳು. ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ ಹಿಂದುಳಿದ ವರ್ಗದವರಿಗೆ ಸಾಮಾಜಿಕ ನ್ಯಾಯ ಒದಗಿಸುವ ಮೂಲಕ ಉತ್ತಮ ಆಡಳಿತಕ್ಕೆ ಹೆಸರುವಾಸಿಯಾಗಿದ್ದೀರಿ ಎಂದು ಹೇಳಿದ್ದಾರೆ.

Comments (0)

Your email address will not be published. Required fields are marked *

Back to top button