ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರನ್ನು ಸಚಿವ ಸತೀಶ್ ಜಾರಕಿಹೊಳಿ ಇಂದು ಸರ್ಕಾರಿ ಗೃಹ ಕಚೇರಿಯಲ್ಲಿ ಭೇಟಿಯಾಗಿ ಸಮಾಲೋಚನೆ ನಡೆಸಿದರು, ಪ್ರಸ್ತುತ ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ವಿಚಾರಗಳ ಬಗ್ಗೆ ಕೆಲವು ಹೊತ್ತು ಮಾತುಕತೆ ನಡೆಸಿದ ಸತೀಶ್ ಜಾರಕಿಹೊಳಿ ಹಾಗೂ ಡಿಕೆ, ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಹೋರಾಟಗಳು ಸೇರಿದಂತೆ ಹಲವಾರು ವಿಚಾರಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಿದ್ದಾರೆ.