ಹುಬ್ಬಳ್ಳಿ: ಸಂವಿಧಾನ ಬದಲಾವಣೆ ಹೇಳಿಕೆ ನೀಡಿರುವ ಆರೋಪದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಹುಬ್ಬಳ್ಳಿ ಬಿಜೆಪಿ ಘಟಕ ಬೀದಿಗಿಳಿದು ಪ್ರತಿಭಟನೆ ನಡೆಸಿತು.
ನಗರದ ಸಂಗೊಳ್ಳಿ ರಾಯಣ್ಣ ಸರ್ಕಲ್ನಲ್ಲಿ ಪ್ರತಿಭಟನೆ ನಡೆಸಿ, ಡಿಸಿಎಂ ಸೇರಿ ಕೈ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಶಾಸಕ ಮಹೇಶ್ ಟೆಂಗಿನಕಾಯಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಡಿಸಿಎಂ ಡಿಕೆಶಿ ಭಾವಚಿತ್ರವಿರೋ ಪೋಸ್ಟ್ ಸುಟ್ಟು ಆಕ್ರೋಶ ವ್ಯಕ್ತಪಡಿಸಿದ್ರು. ಕೂಡಲೇ ಡಿಸಿಎಂ ಡಿಕೆಶಿ ರಾಜ್ಯದ ಜನರ ಕ್ಷಮೆ ಕೇಳಿ ರಾಜೀನಾಮೆ ನೀಡಲು ಬಿಜೆಪಿಗರು ಒತ್ತಾಯಿಸಿದರು.


