Tuesday, April 29, 2025
29.1 C
Bengaluru
LIVE
ಮನೆಜಿಲ್ಲೆಬಿಜೆಪಿ ಅಖಾಡದಲ್ಲಿ ಅಬ್ಬರಿಸಿದ ಟ್ರಬಲ್​ ಶೂಟರ್​​ ಡಿಕೆಶಿ

ಬಿಜೆಪಿ ಅಖಾಡದಲ್ಲಿ ಅಬ್ಬರಿಸಿದ ಟ್ರಬಲ್​ ಶೂಟರ್​​ ಡಿಕೆಶಿ

ಬೆಂಗಳೂರು – ಈ ವಿಧಾನಸಭೆ ಕ್ಷೇತ್ರದಲ್ಲಿ ನಾವು ಸೋತಿದ್ದರೂ ನಿಮ್ಮ ಮೇಲೆ ವಿಶ್ವಾಸ ಇಟ್ಟು ನಿಮ್ಮ ಮನೆ ಬಾಗಿಲಿಗೆ ಬಂದು ನಿಮ್ಮ ಅಹವಾಲು ಸ್ವೀಕಾರ ಮಾಡುತ್ತಿದ್ದೇವೆ. ನಿಮ್ಮ ಸಮಸ್ಯೆಗಳಿಗೆ ಪರಿಹಾರ ಕೊಡಬೇಕು ಎಂದು ಅಧಿಕಾರಿಗಳನ್ನು ಕರೆದುಕೊಂಡು ನಿಮ್ಮ ಮನೆ ಬಾಗಿಲಿಗೆ ಬಂದಿದ್ದೇನೆ. ನಮಗೆ ರಾಜಕಾರಣ ಮುಖ್ಯ ಅಲ್ಲ, ನಿಮ್ಮ ಬದುಕು ಮುಖ್ಯ. ನಿಮ್ಮ ಬದುಕು ಹಸನಾಗಿಸಲು ನಾವು ಕೆಲಸ ಮಾಡುತ್ತೇವೆ. ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು.

ಬಿಜೆಪಿ ಶಾಸಕರ ಕೆಲಸ ಹೊಗಳಿದ ಡಿಕೆಶಿ

ಅನುದಾನ ಬಿಡುಗಡೆ ವಿಚಾರದಲ್ಲಿ ಕಳೆದ ಸರ್ಕಾರ ಕಲಿಸಿದ ಪಾಠ ಈಗ ಪುನರಾವರ್ತನೆಯಾಗಿದೆ. ಆದರೂ ಅದನ್ನು ಬಗೆಹರಿಸುವ ಪ್ರಯತ್ನ ಮಾಡುತ್ತೇವೆ.ಈ ಭಾಗದ ಶಾಸಕರಾದ ಭೈರತಿ ಬಸವರಾಜು ಹಾಗೂ ಮಹದೇವಪುರದ ಶ್ರೀಮತಿ ಮಂಜುಳಾ ಅರವಿಂದ ಲಿಂಬಾವಳಿ ಅವರು ಕುಡಿಯುವ ನೀರು, ಸಂಚಾರ ದಟ್ಟಣೆ, ರಾಜಕಾಲುವೆ, ಮಳೆ ನೀರುಗಾಲುವೆ, ಕಸ ವಿಲೇವಾರಿ ವಿಚಾರವಾಗಿ ಗಮನ ಸೆಳೆದಿದ್ದಾರೆ.

ರಾಜಕಾಲುವೆ ಹೂಳೆತ್ತುವ ವಿಚಾರದಲ್ಲಿ NGT ಆದೇಶ ಪಾಲನೆ ಮಾಡಬೇಕಿದೆ. ಆ ಆದೇಶದ ಪ್ರಕಾರ ರಾಜಕಾಲುವೆ ಪಕ್ಕ 50 ಮೀಟರ್ ಜಾಗದಲ್ಲಿ ಯಾವುದೇ ಕಟ್ಟಡ ನಿರ್ಮಾಣ ಮಾಡುವಂತಿಲ್ಲ. ಹೀಗಾಗಿ ರಾಜಕಾಲುವೆ ಪಕ್ಕದ ಜಾಗವನ್ನು ಸರ್ಕಾರ ವಶಪಡಿಸಿಕೊಂಡು ಅಲ್ಲಿ ರಸ್ತೆ ನಿರ್ಮಾಣ ಮಾಡುವ ಯೋಜನೆ ಇದೆ. ಇದರಿಂದ ರಾಜಕಾಲುವೆ ಹೂಳೆತ್ತಲು ಸಹಕಾರಿ ಆಗುತ್ತದೆ. ಜತೆಗೆ ಸ್ಥಳೀಯ ನಾಗರೀಕರ ಸಂಚಾರಕ್ಕೆ ಹೊಸ ರಸ್ತೆ ಸಿಕ್ಕಂತಾಗುತ್ತದೆ.

ನಿಮ್ಮ ಮನೆ ಬಾಗಿಲಿಗೆ ಆಸ್ತಿ ದಾಖಲೆ ಪತ್ರ ವಿತರಣೆ

ಇನ್ನು ಅನೇಕರು ಸ್ವಯಂ ಘೋಷಣೆ ಆಸ್ತಿ ತೆರಿಗೆ ಪದ್ಧತಿಯಲ್ಲಿ ಪೂರ್ಣ ಪ್ರಮಾಣದ ಆಸ್ತಿಯ ತೆರಿಗೆ ಪಾವತಿ ಮಾಡುತ್ತಿಲ್ಲ. ಹೀಗಾಗಿ ನಾವು ಎಲ್ಲಾ ಆಸ್ತಿಗಳ ಸಮೀಕ್ಷೆ ಮಾಡುತ್ತಿದ್ದೇವೆ. ನಮ್ಮ ಸ್ವತ್ತು ಯೋಜನೆ ಮೂಲಕ ಮುಂದಿನ ಒಂದು ವರ್ಷದ ಒಳಗಾಗಿ ನಿಮ್ಮ ಮನೆ ಬಾಗಿಲಿಗೆ ನಿಮ್ಮ ಆಸ್ತಿ ದಾಖಲೆಗಳನ್ನು ಉಚಿತವಾಗಿ ನೀಡುವ ಕೆಲಸ ಮಾಡುತ್ತೇವೆ. ಈ ವಿಚಾರವಾಗಿ ಯಾರೊಬ್ಬರೂ ಯಾರಿಗೂ ಒಂದು ರೂಪಾಯಿ ಲಂಚ ನೀಡುವ ಅಗತ್ಯವಿಲ್ಲ. ಯಾರಾದರೂ ಲಂಚ ಕೇಳಿದರೆ ದೂರು ನೀಡಿ.” ನಿಮ್ಮ ಮನೆ ಬಾಗಿಲಿಗೆ ಬಂದಿದ್ದೇನೆ. ನಿಮ್ಮ ಸಮಸ್ಯೆಗಳ ಬಗ್ಗೆ ಅಹವಾಲು ನೀಡಿ. ಅದನ್ನು ಬಗೆಹರಿಸಲು ಕ್ರಮ ಕೈಗೊಳ್ಳುತ್ತೇನೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments