Wednesday, August 20, 2025
18.9 C
Bengaluru
Google search engine
LIVE
ಮನೆ#Exclusive NewsTop Newsಡಿಕೆಶಿ ಉಡಾಫೆ ಬಿಟ್ಟು ರಾಜ್ಯದ ಅಭಿವೃದ್ಧಿ ಬಗ್ಗೆ ಗಮನ ಕೊಡಲಿ - ನಿಖಿಲ್​ ಕುಮಾರಸ್ವಾಮಿ

ಡಿಕೆಶಿ ಉಡಾಫೆ ಬಿಟ್ಟು ರಾಜ್ಯದ ಅಭಿವೃದ್ಧಿ ಬಗ್ಗೆ ಗಮನ ಕೊಡಲಿ – ನಿಖಿಲ್​ ಕುಮಾರಸ್ವಾಮಿ

ಬೆಂಗಳೂರು: ಡಿಸಿಎಂ ಡಿಕೆಶಿ ಉಡಾಫೆ ಬಿಟ್ಟು ರಾಜ್ಯದ ಅಭಿವೃದ್ಧಿ ಬಗ್ಗೆ ಗಮನ ಕೊಡಲಿ ಎಂದು ಜೆಡಿಎಸ್​​ ಯುವ ಘಟಕ ಅಧ್ಯಕ್ಷ ನಿಖಿಲ್​ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಜೆಡಿಎಸ್ ಪಕ್ಷದ ಕಾಲ ಮುಗಿಯಿತು ಎಂಬ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಟ್ವೀಟ್​ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು ಶಿವಕುಮಾರಣ್ಣ, ಪ್ರಾದೇಶಿಕ ಪಕ್ಷ ಕಟ್ಟುವುದು, ಯಾರೋ ಗೆದ್ದ ಕಪ್ ಹಿಡಿದು ಮುತ್ತಿಟ್ಟು, ರೀಲ್ಸ್ ಮಾಡುವಷ್ಟು ಸುಲಭವಲ್ಲ. ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದು ಎರಡು ವರ್ಷ ಕಳೆದರು ನಿಗಮ ಮಂಡಳಿಗಳಲ್ಲಿ ನಿಮ್ಮ ಕಾರ್ಯಕರ್ತರಿಗೆ ಅಧಿಕಾರ ಕೊಡಲು ಯೋಗ್ಯತೆ ಇಲ್ಲದವರು ನಮ್ಮ ಕಾರ್ಯಕರ್ತರನ್ನು ಪಕ್ಷಕ್ಕೆ ಕರೆಯುತ್ತಿದ್ದಾರೆ. ಗ್ಯಾರಂಟಿ ಅನುಷ್ಠಾ ಸಮಿತಿ ಹೆಸರಿನಲ್ಲಿ ರಾಜ್ಯದ ಜನರ ತೆರಿಗೆ ಹಣದಲ್ಲಿ ಗೌರವ ಧನ ಪಡೆದು ಕೆಲಸ ಮಾಡುತ್ತಿರುವ ಗಂಜಿ ಗಿರಾಕಿ ಎಂದು ಕಿಡಿಕಾರಿದ್ರು.

ತಾಯಿ ಚಾಮುಂಡೇಶ್ವರಿಯ ಆಶೀರ್ವಾದ, ಮಾನ್ಯ ಮಾಜಿ ಪ್ರಧಾನಮಂತ್ರಿಗಳಾದ ಶ್ರೀ ಹೆಚ್.ಡಿ. ದೇವೇಗೌಡ  ಮತ್ತು ಮಾಜಿ ಮುಖ್ಯಮಂತ್ರಿಗಳು ಹಾಗೂ ಕೇಂದ್ರ ಸಚಿವರಾಗಿರುವ ಶ್ರೀ ಕುಮಾರಣ್ಣನವರ ವರ್ಚಸ್ಸಿನ ಮುಂದೆ ನಿಮ್ಮ ಮಾತುಗಳಿಗೆ ಕವಡೆಕಾಸಿನ ಕಿಮ್ಮತ್ತು ಕೊಡುವವರು ಯಾರು ಇಲ್ಲ. ಇದೇ ಉತ್ಸಾಹ ಬೆಂಗಳೂರಿನ ರಸ್ತೆಗಳ ಗುಂಡಿ ಮುಚ್ಚುವ ಬಗ್ಗೆ ಇದ್ದಿದರೆ ಸ್ವಲ್ಪ ಮರ್ಯಾದೆಯಾದರು ಉಳಿಯುತಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments