Top Newsರಾಜಕೀಯರಾಜ್ಯಸುದ್ದಿ

ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯೋ ಮುಂಚೆ ಡಿಕೆಶಿ ಶಕ್ತಿಪ್ರದರ್ಶನ..!

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ನಾನು ಮುಕ್ತನಾಗುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದ ಬೆನ್ನಲ್ಲೇ ಕಾಂಗ್ರೆಸ್​ನಲ್ಲಿಗ ಭಾರತಿ ಚರ್ಚೆಗೆ ಗ್ರಾಸವಾಗಿದೆ. ಡಿಕೆಶಿ ಅಧ್ಯಕ್ಷ ಸ್ಥಾನದಿಂದ ಇಳಿಯುವ ಮೊದಲು ಶಕ್ತಿ ಪ್ರದರ್ಶನ ಮಾಡಲಿದ್ದಾರೆ ಎಂದು ಹೇಳಲಾಗ್ತಿದೆ.

ಶನಿವಾರ ಕೆಪಿಸಿಸಿ ಪದಾಧಿಕಾರಿಗಳ ಸಭೆಯಲ್ಲೂ ಕೆಲ ನಾಯಕರು ಪ್ರಸ್ತಾಪಿಸಿದ್ದಾರೆ ಎಂಬುದು ಮೂಲಗಳ ಮಾಹಿತಿ. ದಾವಣಗೆರೆ ಅಥವಾ ಚಿತ್ರದುರ್ಗದಲ್ಲಿ ಬೃಹತ್ ಸಮಾವಶಕ್ಕೆ ಪ್ಲ್ಯಾನ್‌ ಮಾಡಲಾಗಿದೆ. ಮಧ್ಯ ಕರ್ನಾಟಕದಲ್ಲಿ ಆಯೋಜಿಸಿದರೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬರಲು ಸಾಧ್ಯವಾಗುತ್ತದೆ ಎಂಬ ಲೆಕ್ಕಾಚಾರವನ್ನು ಹಾಕಲಾಗಿದೆ.

ಏಪ್ರಿಲ್ ಅಥವಾ ಮೇನಲ್ಲಿ ಶಕ್ತಿ ಪ್ರದರ್ಶನಕ್ಕೆ ಡಿಕೆಶಿ ಆಪ್ತರು ಮುಂದಾಗಿದ್ದಾರೆ. ಆದರೆ ಬೆಂಬಲಿಗರು, ಆಪ್ತರ ಪ್ಲ್ಯಾನ್‌ಗೆ ಇನ್ನೂ ಡಿಕೆಶಿಯಿಂದ ಸಿಕ್ಕಿಲ್ಲ ಗ್ರೀನ್ ಸಿಗ್ನಲ್ ಸಿಕ್ಕಿಲ್ಲ ಎನ್ನಲಾಗಿದೆ.

ಎಐಸಿಸಿಯಿಂದ ಅನುಮತಿ ಪಡೆದು ದೊಡ್ಡ ಸಮಾವೇಶ ನಡೆಸುವ ಪ್ರಸ್ತಾಪವಿದೆ. ಪವರ್‌ಶೇರ್‌ಗೂ ಮುನ್ನ ಶಕ್ತಿಪ್ರದರ್ಶನಕ್ಕೆ ಎಐಸಿಸಿ ಅವಕಾಶ ಕೊಡುತ್ತಾ ಎಂಬುದನ್ನ ಕಾದುನೋಡಬೇಕಿದೆ.

Comments (0)

Your email address will not be published. Required fields are marked *

Back to top button