Wednesday, April 30, 2025
24 C
Bengaluru
LIVE
ಮನೆUncategorizedಕುಟುಂಬವಾದದ ಕಾಂಗ್ರೆಸ್ ಬೇಕೇ? ಪರಂಪರೆ ಕಾಪಾಡುವ ಬಿಜೆಪಿ ಬೇಕೇ - ಅಮಿತ್ ಶಾ

ಕುಟುಂಬವಾದದ ಕಾಂಗ್ರೆಸ್ ಬೇಕೇ? ಪರಂಪರೆ ಕಾಪಾಡುವ ಬಿಜೆಪಿ ಬೇಕೇ – ಅಮಿತ್ ಶಾ

ಬೆಂಗಳೂರು: ಕುಟುಂಬವಾದದ ಕಾಂಗ್ರೆಸ್ ಬೇಕೇ? ಪರಂಪರೆ ಕಾಪಾಡುವ ಬಿಜೆಪಿ ಬೇಕೇ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪ್ರಶ್ನಿಸಿದರು.

ಹುಕ್ಕೇರಿಯಲ್ಲಿ ಇಂದು ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಭಾಷಣ ಮಾಡಿದ ಅವರು, ಮೋದಿಜೀಗೆ 10 ವರ್ಷ ಬೆಂಬಲ ನೀಡಿದ್ದೀರಿ ಎಂದರಲ್ಲದೆ, ಅಯೋಧ್ಯೆಯಲ್ಲಿ ರಾಮಮಂದಿರ ಮಾಡಬೇಕಿತ್ತೇ ಎಂದು ಪ್ರಶ್ನಿಸಿ ‘ಹೌದು’ ಎಂದು ಜನರಿಂದ ಉತ್ತರ ಪಡೆದರು.

ಕಾಂಗ್ರೆಸ್ ಪಕ್ಷವು ರಾಮಮಂದಿರ ನಿರ್ಮಾಣ ವಿಚಾರವನ್ನು ವಿಳಂಬ ಮಾಡಿತು. ಮೋದಿಜೀ ಅವರು ಕೇಸು ಗೆದ್ದು, ಭೂಮಿಪೂಜೆ ಮಾಡಿ ಪ್ರಾಣ ಪ್ರತಿಷ್ಠಾಪನೆಯನ್ನೂ ಮಾಡಿದರು. ರಾಹುಲ್ ಬಾಬಾ, ಸೋನಿಯಾ ಗಾಂಧಿ, ಖರ್ಗೆಯವರಿಗೆ ಆಮಂತ್ರಣಪತ್ರ ಇದ್ದರೂ ಅವರು ಗೈರುಹಾಜರಾದರು. ಮತಬ್ಯಾಂಕ್‍ಗಾಗಿ ಈ ನಿರ್ಧಾರ ಮಾಡಿದ್ದಾರೆ. ಇವರಿಗೆ ಮತ ಕೊಡಲು ಸಾಧ್ಯವೇ ಎಂದು ಕೇಳಿದರು.

ಕಾಶಿ ವಿಶ್ವನಾಥ ಮಂದಿರವನ್ನು ಔರಂಗಬೇಬನು ಹಾಳು ಮಾಡಿದ್ದ. ಕಾಶಿ ಕಾರಿಡಾರ್, ಸೋಮನಾಥ ಮಂದಿರ ಮೊದಲಾದ ಕೆಲಸಗಳನ್ನು ಮೋದಿಜೀ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷವು ತುಷ್ಟೀಕರಣಕ್ಕಾಗಿ ಈ ಎಲ್ಲ ವಿಚಾರಗಳನ್ನು ಕಡೆಗಣಿಸಿತ್ತು ಎಂದು ಆಕ್ಷೇಪಿಸಿದರು.

ಕಾಶ್ಮೀರ ನಮ್ಮದಲ್ಲವೇ ಎಂದು ಪ್ರಶ್ನಿಸಿದ ಅವರು, ಖರ್ಗೆಯವರು ನಮಗೆ ಕಾಶ್ಮೀರದ ಜೊತೆಗೇನು ಸಂಬಂಧ ಎನ್ನುತ್ತಾರೆ. ಆದರೆ, ಇಲ್ಲಿನ ಜನತೆ ಕಾಶ್ಮೀರಕ್ಕಾಗಿ ತಮ್ಮ ಪ್ರಾಣವನ್ನೇ ಕೊಡಲು ಸಿದ್ಧರಿದ್ದಾರೆ ಎಂದು ಹೇಳಿದರು. 370ನೇ ವಿಧಿ ರದ್ದು ಮಾಡಬೇಕಿತ್ತಲ್ಲವೇ ಎಂದು ಕೇಳಿದರು. ಕಾಂಗ್ರೆಸ್ ಪಕ್ಷವು ಕಾಶ್ಮೀರಕ್ಕೆ 370ನೇ ವಿಧಿಯಡಿ ನೀಡಿದ್ದ ವಿಶೇಷ ಸ್ಥಾನಮಾನವನ್ನು ಮೋದಿಜೀ ಅವರು ರದ್ದು ಮಾಡಿದ್ದಾರೆ ಎಂದು ತಿಳಿಸಿದರು. ಕಾಶ್ಮೀರದ ಆತಂಕವಾದ, ಭಯೋತ್ಪಾದನೆ ಈಗ ಇಲ್ಲವಾಗಿದೆ ಎಂದು ನುಡಿದರು.

ರಾಹುಲ್ ಬಾಬಾ ಅವರು ಸಂಸತ್ತಿನಲ್ಲಿ ಆಗ ಮಾತನಾಡಿದ್ದರು. 370 ನೇ ವಿಧಿ ರದ್ದು ಮಾಡಿದರೆ ರಕ್ತದ ನದಿ ಹರಿಯುತ್ತದೆ ಎಂದಿದ್ದರು. 5 ವರ್ಷ ಕಳೆದರೂ ಏನೂ ಸಮಸ್ಯೆ ಆಗಿಲ್ಲ ಎಂದು ನುಡಿದರು. ಮೋದಿಜೀ ಅವರು ದೇಶವನ್ನು ಬಾಧಿಸುತ್ತಿದ್ದ ಭಯೋತ್ಪಾದಕತೆಯಿಂದ ಮುಕ್ತಿ ಕೊಟ್ಟಿದ್ದಾರೆ; ಪಿಎಫ್‍ಐ ನಿಷೇಧಿಸಿದ್ದಾರೆ ಎಂದು ತಿಳಿಸಿದರು.

ಎಸ್‍ಡಿಪಿಐ ಬೆಂಬಲದೊಂದಿಗೆ ಕಾಂಗ್ರೆಸ್ ಸರಕಾರ ನಡೆಯುತ್ತಿದೆ ಎಂದು ಟೀಕಿಸಿದ ಅವರು, ಬೆಂಗಳೂರು ಬಾಂಬ್ ಸ್ಫೋಟವನ್ನು ಪ್ರಸ್ತಾಪಿಸಿದರು. ನೇಹಾ ಹಿರೇಮಠ ಅವರ ಹತ್ಯೆ ಕೇಸನ್ನು ಸರಿಯಾಗಿ ತನಿಖೆ ಮಾಡಲು ಆಗದಿದ್ದರೆ ಸಿಬಿಐಗೆ ಕೊಡಿ ಎಂದು ರಾಜ್ಯ ಸರಕಾರಕ್ಕೆ ಎಚ್ಚರಿಸಿದರು.

ಹಿಂದೂ ವಿರೋಧಿಗಳು ಮತ್ತು ಹಿಂದೂಗಳಿಗೆ ಅವಮಾನ ಮಾಡುವವರು ಮತ್ತು ಹಿಂದೂ ಸನಾತನ ಧರ್ಮ ಸಂರಕ್ಷಣೆ ಮಾಡುವವರ ನಡುವೆ ಮತಸಮರ ನಡೆದಿದೆ ಎಂದು ತಿಳಿಸಿದರು. ಅಣ್ಣಾ ಸಾಹೇಬ ಜೊಲ್ಲೆ ಅವರಿಗೆ ಕೊಟ್ಟ ಮತವು ಮೋದಿಜೀ ಅವರಿಗೆ ತಲುಪಲಿದೆ ಎಂದರು. ಕರ್ನಾಟಕದಲ್ಲಿ ಬಿಜೆಪಿ ಸರಕಾರ ಇದ್ದಾಗ ರೈತರಿಗೆ 10 ಸಾವಿರ ಸಿಗುತ್ತಿತ್ತು. ರಾಜ್ಯ ಸರಕಾರ ಕೊಡುತ್ತಿದ್ದ 4 ಸಾವಿರವನ್ನು ರದ್ದು ಮಾಡಿದ್ದಾರೆ. ಯಾಕೆ ಹೀಗೆ ಮಾಡಿದ್ದೀರಿ ಎಂದು ಕೇಳಿದರು.

ಬರಗಾಲ, ನೀರಿನ ಸಮಸ್ಯೆ ತೀವ್ರಗೊಂಡಿದೆ. ವಿದ್ಯುತ್ ಸಂಕಷ್ಟ ಎದುರಾಗಿದೆ. ಕಾಂಗ್ರೆಸ್ಸಿಗರು ಕರ್ನಾಟಕವನ್ನು ದಿವಾಳಿ ಮಾಡಿದ್ದಾರೆ. ಮೋದಿಯವರಿಗೆ ಮತ ಕೊಟ್ಟರೆ ಕರ್ನಾಟಕದ ಸಮಗ್ರ ಅಭಿವೃದ್ಧಿ ಮಾಡುತ್ತೇವೆ ಎಂದು ಅವರು ಪ್ರಕಟಿಸಿದರು. ನದಿ ಜೋಡಣೆ ಮೂಲಕ ನೀರಿನ ಸಮಸ್ಯೆ ಪರಿಹರಿಸುವುದಾಗಿ ತಿಳಿಸಿದರು. ಇಲ್ಲಿನ 3 ಲಕ್ಷ ಮನೆಗಳಿಗೆ ನಳ್ಳಿ ನೀರು ಸಂಪರ್ಕ, ಗ್ಯಾಸ್ ಸಂಪರ್ಕ, 2 ಲಕ್ಷ ರೈತರಿಗೆ ಕಿಸಾನ್ ಸಮ್ಮಾನ್ ಸೇರಿ ವಿವಿಧ ಅಭಿವೃದ್ಧಿ ಕಾರ್ಯಗಳ ಕುರಿತು ಕೂಡ ಅವರು ಇದೇವೇಳೆ ಮಾಹಿತಿ ಕೊಟ್ಟರು.

ರಾಹುಲ್ ಬಾಬಾ ಕಂಪೆನಿಯಿಂದ ದೇಶವನ್ನು ಸುರಕ್ಷಿತವಾಗಿ ಇಡಲು ಸಾಧ್ಯವಿಲ್ಲ. ಮೋದಿಜೀ ಅವರ ಅವಧಿಯಲ್ಲಿ ದೇಶ ಸುರಕ್ಷಿತವಾಗಿತ್ತು; ಸಮೃದ್ಧ ದೇಶವಾಗಿ ಭಾರತ ಹೊರಹೊಮ್ಮಿದೆ. ಸೋನಿಯಾ ಗಾಂಧಿ, ರಾಹುಲ್, ಮನಮೋಹನ್ ಸಿಂಗ್ ಅವರ ಸರಕಾರ ಇದ್ದಾಗ ಬಾಂಬ್ ಸ್ಫೋಟ, ಭಯೋತ್ಪಾದನೆ ನಿರಂತರವಾಗಿ ನಡೆದಿತ್ತು ಎಂದು ವಿವರಿಸಿದರು.

ಫ್ರೀಡಂ ಟಿವಿಯಲ್ಲಿ ಜಾಹೀರಾತು ನೀಡಲು
ಈ ನಂಬರ್ ಗೆ ಸಂಪರ್ಕಿಸಿ
Phone Number : +91 9164072277
Email id : salesatfreedomtv@gmail.com

 

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments