Top Newsರಾಜ್ಯಸಿನಿಮಾಸುದ್ದಿ

ನಟ ಶಿವರಾಜ್ ಕುಮಾರ್ ಶಸ್ತ್ರಚಿಕಿತ್ಸೆ ಯಶಸ್ವಿ : ಅಭಿಮಾನಿಗಳಿಗೆ ಗೀತಾ ಶಿವರಾಜ್​ಕುಮಾರ್ ಹೇಳಿದ್ದೇನು?

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಅಮೆರಿಕದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದಾರೆ. ಶಿವರಾಜ್‌ಕುಮಾರ್ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಇದನ್ನು ಹಂಚಿಕೊಳ್ಳಲು ಬಹಳ ಸಂತಸವಾಗುತ್ತಿದೆ ಎಂದು ಪತ್ನಿ ಗೀತಾ ಶಿವರಾಜ್​ಕುಮಾರ್ ಹಾಗೂ ಬಾಮೈದ ಮಧು ಬಂಗಾರಪ್ಪ ಅವರು ವಿಡಿಯೋ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

ಸದ್ಯದಲ್ಲೇ ಶಿವರಾಜ್‌ಕುಮಾರ್ ಅವರು ನಿಮ್ಮ ಜೊತೆ ಮಾಡನಾಡಲಿದ್ದಾರೆ. ಆಪರೇಷನ್‌ನಿಂದಾಗಿ ಸುಸ್ತಾಗಿರುವುದರಿಂದ ಇನ್ನು 3-4 ದಿನಗಳಲ್ಲಿ ನಿಮ್ಮ ಜೊತೆ ಮಾತನಾಡಲಿದ್ದಾರೆ. ನಿಮ್ಮ ಪ್ರೀತಿ ವಿಶ್ವಾಸಕ್ಕೆ ನಾನು ಯಾವಾಗಲು ಚಿರಋಣಿ. ಇದನ್ನು ನಾನು ಜನ್ಮದಲ್ಲಿ ಮರೆಯಲ್ಲ ಎಂದು ಗೀತಕ್ಕ ಧನ್ಯವಾದ ತಿಳಿಸಿದ್ದಾರೆ.

Comments (0)

Your email address will not be published. Required fields are marked *

Back to top button