#Exclusive NewsTop Newsರಾಜಕೀಯರಾಜ್ಯಸುದ್ದಿ

ಸಿದ್ದರಾಮಯ್ಯ ಸರ್ಕಾರಕ್ಕೆ ಮಾನ ಮರ್ಯಾದೆ ಇದೆಯಾ? ; ಆರ್.ಅಶೋಕ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೋಟೀಸ್ ಗಳನ್ನು ವಾಪಸ್ಸು ತೆಗೆದುಕೊಂಡಿದ್ದೇವೆಂದು ಹೇಳುತ್ತಿದ್ದಾರೆ. ಆದರೆ, ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ 2 ದಿನಗಳ ಹಿಂದೆ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ವಕ್ಫ್ ಬೋರ್ಡ್ ನೀಡಿದ ನೋಟೀಸ್ ಗಳ ಪ್ರಗತಿ ಕುರಿತು ವರದಿಯನ್ನು ಕೇಳಿದ್ದಾರೆ. ದ್ವಿಮುಖ ನೀತಿ ಪ್ರದರ್ಶಿಸುತ್ತಿರುವ ಸಿದ್ದರಾಮಯ್ಯ ಸರ್ಕಾರಕ್ಕೆ ಮಾನ ಮರ್ಯಾದೆ ಇದೆಯಾ? ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಶನಿವಾರ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಕ್ಫ್ ಮಂಡಳಿ ಭೂ ಕಬಳಿಸುವುದರ ನೇತೃತ್ವನ್ನು  ಸಚಿವ ಜಮೀರ್ ಅವರಿಗೆ ವಹಿಸಲಾಗಿದೆ. ಸಿದ್ದರಾಮಯ್ಯ ಅವರು ನೋಟಿಸ್ ವಾಪಸ್ ಪಡೆಯಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ. ಆದರೆ, ಮುಖ್ಯ ಕಾರ್ಯದರ್ಶಿಯವರು ಭೂಮಿ ವಶಪಡಿಸಿಕೊಳ್ಳಲು ಲಿಖಿತ ಸೂಚನೆ ನೀಡಿದ್ದಾರೆ. ಈ ಸತ್ಯ ಮರೆಮಾಚು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುಳ್ಳು ಹೇಳಿದ್ದಾರೆಂದು ಹೇಳಿದರು.

Comments (0)

Your email address will not be published. Required fields are marked *

Back to top button