#Exclusive NewsTop Newsಮನರಂಜನೆರಾಜ್ಯಸಿನಿಮಾಸುದ್ದಿ

ಡಿಕೆ ಶಿವಕುಮಾರ್ ದಂಪತಿಗೆ ಮದುವೆ ಆಹ್ವಾನ ನೀಡಿದ ಡಾಲಿ…!

ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ ಅವರು ಫೆ.16ರಂದು ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಈ ಹಿನ್ನೆಲೆ ಉಪಮುಖ್ಯಮಂತಿ ಡಿಕೆ ಶಿವಕುಮಾರ್  ಮತ್ತು ಡಿಕೆ ಸುರೇಶ್‌ಗೆ  ಮದುವೆ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ ನೀಡಿದ್ದಾರೆ.

ಡಿಕೆ ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿ ದಂಪತಿಗೆ ಮದುವೆ ಆಹ್ವಾನ ನೀಡಿದ್ದಾರೆ ಡಾಲಿ. ಕೆಲ ಕಾಲ ನಟ ಸಮಯ ಕಳೆದಿದ್ದಾರೆ. ಇದೇ ವೇಳೆ, ಡಿಕೆ ಸುರೇಶ್‌ರನ್ನು ಭೇಟಿಯಾಗಿ ಮದುವೆಗೆ ಆಮಂತ್ರಿಸಿದ್ದಾರೆ.

ಅಂದಹಾಗೆ, ಡಾಕ್ಟರ್ ಧನ್ಯತಾ ಜೊತೆ ಡಾಲಿ ಮೈಸೂರಿನಲ್ಲಿ ಮದುವೆಯಾಗುತ್ತಿದ್ದಾರೆ. ಗುರುಹಿರಿಯರ ಸಮ್ಮುಖದಲ್ಲಿ ಈ ಜೋಡಿ ಹಸೆಮಣೆ ಏರಲಿದ್ದಾರೆ. ಈ ಮದುವೆಯಲ್ಲಿ ಸ್ಯಾಂಡಲ್‌ವುಡ್ ಕಲಾವಿದರು, ರಾಜಕೀಯ ಗಣ್ಯರು ಭಾಗಿಯಾಗಲಿದ್ದಾರೆ.

ಈ ಸಂತಸದ ವಿಚಾರವನ್ನು ಡಿ.ಕೆ.ಶಿವಕುಮಾರ್​ ಅವರು ತಮ್ಮ ಎಕ್ಷ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

Comments (0)

Your email address will not be published. Required fields are marked *

Back to top button